ಬೆಂಗಳೂರು: ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಒಂದೆರಡು ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಎಂಇಪಿ ರಾಷ್ಟ್ರೀಯ ಅಧ್ಯಕ್ಷೆ ಡಾ. ನೌಹೀರಾ ಶೇಕ್ ಹೇಳಿದ್ದಾರೆ.
ನಗರದ ಲೀಲಾ ಪ್ಯಾಲೆಸ್ ಹೋಟೆಲ್‌ನಲ್ಲಿ ಇಂದು ನಡೆದ ಸಮಾರಂಭದಲ್ಲಿ ನರ್ಸ್ ಜಯಲಕ್ಷ್ಮೀ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಬಳಿಕ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ಮತ್ತಷ್ಟು ನಾಯಕರು ಪಕ್ಷ ಸೇರಲಿದ್ದಾರೆ. ಅಲ್ಲದೆ ಈಗಾಗಲೇ ನಿರ್ಧರಿಸಿದಂತೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದ್ದು, ಶೇ. 35ರಷ್ಟು ಸ್ಥಾನಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಹಲವಾರು ಸಮಸ್ಯೆಗಳಾದ ವಿದ್ಯುತ್, ನೀರಿನ ಸಮಸ್ಯೆ, ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಹಾಗೂ ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಕೊನೆಯ ಉಸಿರಿನ ತನಕ ಹೋರಾಟ ಮಾಡುತ್ತೇನೆ ಎಂದರು.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದಂತೆಯೇ ಎಂಇಪಿಗೆ ನಿರೀಕ್ಷೆಗೂ ಮೀರಿದ ಜನ ಬೆಂಬಲ ದೊರಕುತ್ತಿದೆ ಎಂದು ಹೇಳಿದರು.
ಪಕ್ಷಕ್ಕೆ ಸೇಪರ್ಡೆಯಾಗಿ ಮಾತನಾಡಿದ ನರ್ಸ್ ಜಯಲಕ್ಷ್ಮೀ, ನೌಹೀರಾ ಶೇಕ್ ಮಾಡಿರುವ ಕೆಲಸ ಕಾರ್ಯಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಅವರಿಗೆ ಸಾಥ್ ಕೊಡಬೇಕು ಎಂದು ಒಳ್ಳೆಯ ಉದ್ದೇಶ ಇಟ್ಟುಕೊಂಡು ಪಕ್ಷ ಸೇರಿದ್ದೇನೆ. ಎಂಇಪಿ ವತಿಯಿಂದಲೇ ಚುನಾವಣೆ ಕಣಕ್ಕೆ ಇಳಿಯುತ್ತಿದ್ದೇನೆ ಎಂದು ಘೋಷಿಸಿದರು.
ಎಂಇಪಿ ಪಕ್ಷದ ಸಹಕಾರವಿಲ್ಲದೇ ರಾಜ್ಯದಲ್ಲಿ ಯಾವ ಪಕ್ಷ ಸರ್ಕಾರ ರಚನೆ ಮಾಡುಲು ಆಗದಂತ ಮಹತ್ತರ ಪಾತ್ರವನ್ನು ಎಂಇಪಿ ವಹಿಸಲಿದೆ ಹೀಗಾಗಿ ರಾಜ್ಯದಲ್ಲಿ ಮಹಿಳೆಯರು ಹೆಚ್ಚಿನ ಎಂಇಪಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ಮನವಿ ಮಾಡಿದರು.
Click this button or press Ctrl+G to toggle between Kannada and English