ಕೃಷ್ಣಮೃಗ ಬೇಟೆ ಪ್ರಕರಣ: ಕೋರ್ಟ್‌ನಿಂದ ಸಲ್ಮಾನ್‌ ಖಾನ್‌ಗೆ ಜಾಮೀನು

5:35 PM, Saturday, April 7th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

salman-khanಜೋಧಪುರ್‌: 20 ವರ್ಷಗಳ ಹಿಂದಿನ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಜೋಧಪುರ್‌ ಕೋರ್ಟ್‌ನಿಂದ ಜಾಮೀನು ನೀಡಲಾಗಿದೆ.

ಇನ್ನು ಖಾನ್‌ಗೆ 50 ಸಾವಿರ ರೂಪಾಯಿ ಬಾಂಡ್‌ ನೀಡುವಂತೆ ಕೋರ್ಟ್‌ ಸೂಚನೆ ನೀಡಿದೆ. 1998ರಲ್ಲಿ ಕೃಷ್ಣಮೃಗಗಳ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ದಿನಗಳ ಹಿಂದೆ ರಾಜಸ್ಥಾನದ ಜೋಧಪುರ ನ್ಯಾಯಾಲಯ ಮಹತ್ವದ ತೀರ್ಪು ನೀಡಿ, ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಐದು ವರ್ಷ ಜೈಲು ಶಿಕ್ಷೆ ನೀಡಿ ಆದೇಶ ಹೊರಡಸಿತ್ತು. ಜತೆಗೆ 10 ಸಾವಿರ ರೂಪಾಯಿ ದಂಡ ಹಾಕಿತ್ತು.

‘ಹಮ್ ಸಾಥ್‌ ಸಾಥ್‌ ಹೈ’ ಚಿತ್ರದ ಚಿತ್ರೀಕರಣದ ವೇಳೆ ಜೋಧ್‌ಪುರ್‌ ಸಮೀಪದ ಗ್ರಾಮದಲ್ಲಿ ಎರಡು ಕೃಷ್ಣಮೃಗ ಬೇಟೆಯಾಡಿದ ಆರೋಪ ಬಾಲಿವುಡ್‌‌ ನಟ-ನಟಿಯರ ಮೇಲಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ನ್ಯಾಯಾಲಯ ಸಲ್ಮಾನ್‌ಗೆ 5 ವರ್ಷ ಜೈಲು ಶಿಕ್ಷೆ ಪ್ರಕಟಿಸಿತ್ತು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English