ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ದೂರು ದಾಖಲಿಸಿದೆ.
ಚುನಾವಣಾಧಿಕಾರಿ ವೈಶಾಲಿಗೆ ದ.ಕ. ಜಿಲ್ಲಾ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ. ಬಿಜೆಪಿ ಮುಖಂಡ ರಾಜಾರಾಂ ಭಟ್ ಆಯೋಜಿಸಿದ್ದ ಉಪವಾಸ ಸತ್ಯಾಗ್ರಹ ಪ್ರತಿಭಟನೆಯಲ್ಲಿ ಕಲ್ಲಡ್ಕ ಪ್ರಭಕರ್ ಭಟ್ ಕೋಮು ದ್ವೇಷದಿಂದ ಕೂಡಿದ ಭಾಷಣ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ದೂರಿದ್ದಾರೆ.
ಚುನಾವಣೆ ಮುಗಿಯುವವರೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಒತ್ತಾಯಿಸಿದ್ದಾರೆ.
Click this button or press Ctrl+G to toggle between Kannada and English