ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಉಪವಾಸ ನಿರಶನ ಕೈಗೊಂಡಿದೆ. ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ರಾಜ್‌ಘಾಟ್‌ನಲ್ಲಿ ಕೈ ನಾಯಕರು ಸತ್ಯಾಗ್ರಹ ನಡೆಸಿದರು.
ದಲಿತರ ಮೇಲಿನ ದೌರ್ಜನ್ಯ ತಡೆ ಹಾಗೂ ಸಂಸತ್ತಿನ ಕಲಾಪ ಸರಿಯಾಗಿ ನಿರ್ವಹಣೆ ಸೇರಿದಂತೆ ಹಲವು ವಿಷಯಗಳಲ್ಲಿ ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದೆ.
ದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗಿತು. ಈ ವೇಳೆ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಶೀಲಾ ದೀಕ್ಷಿತ್, ಅಶೋಕ್ ಗೆಹ್ಲೋಟ್ ಹಾಗೂ ಅಜಯ್ ಮಕೇನ್ ಮುಂತಾದವರು ಪಾಲ್ಗೊಂಡಿದ್ದರು.
ಅಲ್ಲದೇ, ದೇಶಾದ್ಯಂತ ಕೂಡ ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಆಯೋಜಿಸಿದ್ದು, ಎಲ್ಲಾ ಜಿಲ್ಲಾ ಕೇಂದ್ರಗಳು ಮತ್ತು ತಾಲೂಕುಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು. ಬಿಜೆಪಿ ಸರ್ಕಾರ ದೇಶದಲ್ಲಿ ಸಮಾಜದ ಸಾಮರಸ್ಯ ಮತ್ತು ಶಾಂತಿಗೆ ಧಕ್ಕೆ ತರುತ್ತಿದೆ ಎಂದು ಕಾಂಗ್ರೆಸ್ ದೂರಿದೆ.
ಇದೇ ವೇಳೆ ಕಾಂಗ್ರೆಸ್ ನಾಯಕರು ತಮ್ಮ ಉಪವಾಸ ಸತ್ಯಾಗ್ರಹಕ್ಕೂ ಮುನ್ನ ತಿಂಡಿ ಸೇವಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೇ, ಕೆಲ ಕೈ ನಾಯಕರು ಉಪಹಾರ ಸೇವಿಸುತ್ತಿರುವ ಫೋಟೋವನ್ನು ಬಿಜೆಪಿ ಮುಖಂಡ ಹರೀಶ್ ಖುರಾನಾ ಬಿಡುಗಡೆ ಮಾಡಿದ್ದಾರೆ.
Click this button or press Ctrl+G to toggle between Kannada and English