ಮಂಗಳೂರು: ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಸಭೆಯು ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ ನೇತೃತ್ವದಲ್ಲಿ ಜರಗಿತು.
ಜೀವನೋಪಾಯಕ್ಕಾಗಿ ದೇಶ ಬಿಟ್ಟು ವಿದೇಶದಲ್ಲಿ ನಾವು ದುಡಿಯುತ್ತಿದ್ದರೂ ದೇಶದ ಹಿತ ಚಿಂತನೆಯಿಂದ ದೇಶಕ್ಕೆ ತೆರಳಿ ಮತದಾನ ಮಾಡುವ ಕೆಲಸವನ್ನು ನಾವೆಲ್ಲರೂ ಮಾಡಬೇಕು. ಚುನಾವಣೆಯಲ್ಲಿ ಮತದಾನ ಮಾಡುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಯೋಗ್ಯ ಜನಪ್ರತಿನಿಧಿಯನ್ನು ಆಯ್ಕೆ ಮಾಡುವುದಾಗಿದೆ.
ಈ ಹಿನ್ನೆಲೆಯಲ್ಲಿ ದೇಶದ ಹಿತದೃಷ್ಟಿಯಿಂದ ಮತ್ತು ಎನ್ಆರ್ಐಗಳ ಭವಿಷ್ಯದ ದೃಷ್ಟಿಯಿಂದ ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅನಿವಾರ್ಯತೆ ಇದೆ ಎಂದು ಎನ್ಆರ್ಐ ವಿಂಗ್ ಘಟಕದ ಅಧ್ಯಕ್ಷ ಇಬ್ರಾಹಿಂ ಕಣ್ಣಂಗಾರ್ ಹೇಳಿದರು.
ಪ್ರಧಾನ ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ ಮಾತನಾಡಿ ಕಾಂಗ್ರೆಸ್ ಗೆಲುವು ನಮ್ಮ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಗೆ ನಾಂದಿಯಾಗುತ್ತದೆ. ಎಲ್ಲರೂ ಒಗ್ಗೂಡಿ ಅಭಿವೃದ್ಧಿಯ ಕರ್ನಾಟಕದ ನಿರ್ಮಾಣಕ್ಕೆ ಶ್ರಮಿಸ ಬೇಕು ಎಂದರು. ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು.
Click this button or press Ctrl+G to toggle between Kannada and English