ಬೆಂಗಳೂರು: ಕಾಂಗ್ರೆಸ್ ತನ್ನ 218 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿ ಕೂಡಾ ತನ್ನ 2ನೇ ಪಟ್ಟಿಯನ್ನು ಪ್ರಕಟಿಸಿದೆ.
ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾದ ನಂತರ ಅಸಮಾಧಾನ ಭುಗಿಲೆದ್ದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸಮಾಲೋಚನೆ ನಡೆಸಿ, ಅಳೆದು ತೂಗಿ 82 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಎರಡನೇ ಪಟ್ಟಿ ಬಿಡುಗಡೆಯಿಂದ 18ರಿಂದ 20 ಕ್ಷೇತ್ರಗಳಲ್ಲಿ ಅಸಮಾಧಾನ ಉಂಟಾಗುವ ಸಾಧ್ಯತೆಗಳಿವೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಗುರುವಾರ ರಾತ್ರಿ ಬೆಂಗಳೂರಿನಿಂದ ಅನಂತಕುಮಾರ್, ಜಾವಡೇಕರ್, ಮುರಳೀಧರ ರಾವ್, ಪಿಯೂಷ್ ಗೋಯೆಲ್ ಅವರನ್ನು ಕರೆಸಿಕೊಂಡು ಯಡಿಯೂರಪ್ಪ ಹಾಗೂ ಸಂತೋಷ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದರು.
ಮೊದಲ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಜೆಪಿ, 2ನೇ ಪಟ್ಟಿಯಲ್ಲಿ 82 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ಬಿಜೆಪಿ ಪ್ರಕಟಿಸಿರುವ ಎರಡೂ ಪಟ್ಟಿಗಳಲ್ಲಿ ಒಟ್ಟು 154 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್ ಆಗಿದ್ದು, ಇನ್ನೂ 70 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಾಕಿಯಿದೆ.
Click this button or press Ctrl+G to toggle between Kannada and English