ಬೆಳ್ತಂಗಡಿ: ಜಮ್ಮು ಕಾಶ್ಮೀರದ ಕಥುವಾದಲ್ಲಿ 8 ವರ್ಷದ ಪುಟ್ಟ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಘಟನೆಯನ್ನು ಖಂಡಿಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ತಾಲೂಕು ಸಮಿತಿಯು ತಾಲೂಕಿನ ಸೋಮವಾರ ಸುನ್ನತ್ ಕೆರೆ ಪರಿಸರದಲ್ಲಿ ಮೊಂಬತ್ತಿ ಹೊತ್ತಿಸಿ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ದ.ಕ. ಜಿಲ್ಲಾ ಪ್ರ. ಕಾರ್ಯದರ್ಶಿ ಸಾದಿಕ್ ಪುತ್ತೂರು, “ದೇಶದಲ್ಲಿ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಿಜೆಪಿ ಸರಕಾರ ಬಂದ ನಂತರ ಅದು ಮಿತಿಮೀರಿದೆ. ಕಥುವಾ ಪ್ರಕರಣದಲ್ಲಿ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು”
ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿಯ ನಿಕಟಪೂರ್ವ ಅಧ್ಯಕ್ಷ ರಮೀಝ್, ತಾಲೂಕು ಉಪಾಧ್ಯಕ್ಷ ಸಫ್ವಾನ್ ಎಸ್.ಕೆ., ತಾಲೂಕು ಸಮಿತಿಯ ಸದಸ್ಯರಾದ ಅರ್ಶದ್, ಮುಸ್ತಫ, ಜಾಫರ್, ಝಾಯಿದ್, ಸಿರಾಜ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Click this button or press Ctrl+G to toggle between Kannada and English