ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಭದ್ರ ಕೋಟೆಯಂತಿದ್ದ ಮುಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಬಂಡಾಯ ಸ್ಪೋಟಗೊಂಡಿದೆ. ಮುಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಶಾಸಕ ಅಭಯಚಂದ್ರ ಜೈನ್ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಯುವ ಕಾಂಗ್ರೆಸ್ ಮುಖಂಡರು ತಿರುಗಿ ಬಿದ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕೈ ಪಾಳಯದಲ್ಲಿ ಭಿನ್ನಮತ ಆರಂಭವಾಗಿದೆ. ಮೂಡಬಿದ್ರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ಟಿಕೆಟ್ ಕೈ ತಪ್ಪಿದೆ. ಈ ಹಿನ್ನೆಲೆಯಲ್ಲಿ ಯೂತ್ ಕಾಂಗ್ರೆಸ್ ಘಟಕ ಸಿಡಿದೆದ್ದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಯೂತ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.ಜೆಡಿಎಸ್ ಮುಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಯುವಕರಿಗೆ ಅವಕಾಶ ನೀಡಿದ್ದಲಿ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶಾಸಕ ಅಭಯಚಂದ್ರ ಜೈನ್ ಬಹಿರಂಗವಾಗಿ ಘೋಷಿಸಿದ್ದರು.
ಈ ಹಿನ್ನೆಲೆಯಲ್ಲಿ ಮಿಥುನ್ ರೈಗೆ ಟಿಕೆಟ್ ನೀಡೋದಾಗಿ ವರ್ಷದ ಹಿಂದೆ ಅಭಯಚಂದ್ರ ಜೈನ್ ಅಭಯ ನೀಡಿದ್ದರು. ಈಗ ಮಾತು ತಪ್ಪಿದ್ದಾರೆ ಎಂದು ಯುವ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾತು ತಪ್ಪಿದ ಅಭಯಚಂದ್ರ ಜೈನ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಯೂತ್ ಕಾಂಗ್ರೆಸ್ ನ 50 ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಮುಖಂಡರು ಹಾಗೂ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಇದು ಕಾಂಗ್ರೆಸ್ ಕತೆಯಾದರೆ ಬಿಜೆಪಿ ಪರಿಸ್ಥತಿ ಕೂಡ ಭಿನ್ನವಾಗಿಲ್ಲ. ಮುಲ್ಕಿ-ಮೂಡಬಿದಿರೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಉಮಾನಾಥ್ ಕೋಟ್ಯಾನ್ ಅವರನ್ನು ಕಣಕ್ಕಿಳಿಸಿರುವ ಹಿನ್ನೆಲೆಯಲ್ಲಿ ಜಗದೀಶ್ ಅಧಿಕಾರಿ ಬಂಡಾಯದ ಬಾವುಟ ಹಾರಿಸಿದ್ದಾರೆ.
Click this button or press Ctrl+G to toggle between Kannada and English