ಮಂಗಳೂರು: ಸುರತ್ಕಲ್ನಲ್ಲಿ ತಾತ್ಕಾಲಿಕವಾಗಿ ನಿರ್ಮಾಣಗೊಂಡಿರುವ ಮಾರುಕಟ್ಟೆಯಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ಎಂಟು ಅಂಗಡಿಗಳು ಬೆಂಕಿಯಿಂದ ಹಾನಿಗೀಡಾಗಿವೆ.
ಘಟನೆಯಲ್ಲಿ ತರಕಾರಿ ಅಂಗಡಿಯೊಂದು ಸೇರಿದಂತೆ 3 ಅಂಗಡಿಗಳು ಸಂಪೂರ್ಣ ಭಸ್ಮವಾಗಿವೆ. ಉಳಿದ ಅಂಗಡಿಗಳಿಗೆ ಹಾನಿಯಾಗಿವೆ ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ ಸಿಡಿಲು, ಮಿಂಚು ಸಹಿತ ಮಳೆ ಸುರಿದಿದ್ದು, ಈ ವೇಳೆ ಉಂಟಾಗಿರುವ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ಬೆಂಕಿ ಅವಘಡ ಸಂಭವಿಸಿರಬಹುದೆಂದು ಸುರತ್ಕಲ್ ಠಾಣಾ ಪೊಲೀಸರು ತಿಳಿಸಿದ್ದಾರೆ. ಇಂದು ಮುಂಜಾವ 2 ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Click this button or press Ctrl+G to toggle between Kannada and English