ಮಂಗಳೂರು: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಂಗಳವಾರದಿಂದ ಪ್ರಾರಂಭಗೊಂಡಿದೆ. ರಾಜಕೀಯ ಪಕ್ಷದ ಬಹುತೇಕ ಪ್ರಮುಖ ಅಭ್ಯರ್ಥಿಗಳು ಏ. 19 ರಿಂದ ನಾಮಪತ್ರ ಸಲ್ಲಿಸಲು ತಿರ್ಮಾನಿಸಿದ್ದಾರೆ.
ಏ.1 9 ರಂದು ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಆಭ್ಯರ್ಥಿ ಬಿ.ರಮಾನಾಥ ರೈ, ಮೂಡಬಿದ್ರೆ ಕಾಂಗ್ರೆಸ್ ಆಭ್ಯರ್ಥಿ ಕೆ.ಅಭಯಚಂದ್ರ ಜೈನ್, ಸುಳ್ಯದ ಕಾಂಗ್ರೆಸ್ ಅಭ್ಯರ್ಥಿ ಡಾ. ರಘು, ಮಂಗಳೂರು ಉತ್ತರ ಕ್ಷೇತ್ರದ ಸಿಪಿಎಂ ಅಭ್ಯರ್ಥಿ ಮುನೀರ್ ಕಾಟಿಪಳ್ಳ ನಾಮಪತ್ರ ಸಲ್ಲಿಸಲಿದ್ದಾರೆ.
ಏ. 20ರಂದು ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಅಂಗಾರ, ಬೆಳ್ತಂಗಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಸಂತ ಬಂಗೇರ, ಬಂಟ್ವಾಳ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ರಾಜೇಶ್ ನಾಯಕ್, ಎಸ್‌ಡಿಪಿಐ ಅಭ್ಯರ್ಥಿ ರಿಯಾಜ್ ಫರಂಗಿಪೇಟೆ, ಮಂಗಳೂರು ಕ್ಷೇತ್ರದ ಸಿಪಿಎಂ ಅಭ್ಯರ್ಥಿ ನಿತಿನ್ ಕುಮಾರ್ ಕುತ್ತಾರ್ ನಾಮಪತ್ರ ಸಲ್ಲಿಸಲಿದ್ದಾರೆ.
ಏ. 23ರಂದು ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಕುಂತಲಾ ಶಟ್ಟಿ, ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದರೂ, ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ, ಸಿಪಿಎಂ ಅಭ್ಯರ್ಥಿ ಸುನೀಲ್ ಕುಮಾರ್ ಬಜಾಲ್, ಮಂಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್, ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಯಿದ್ದೀನ್ ಬಾವಾ, ಎಸ್‌ಡಿಪಿಐ ಅಭ್ಯರ್ಥಿ ಜಲೀಲ್ ಕೃಪ್ಣಾಪುರ, ಮೂಡಬಿದಿರೆ ಕ್ಷೇತ್ರದ ಸಿಪಿಎಂ ಅಭ್ಯರ್ಥಿ ಯಾದವ ಶೆಟ್ಟಿ ನಾಮಪತ್ರ ಸಲ್ಲಿಸಲಿದ್ದಾರೆ.
ಏ. 22 ರಂದು ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ಏ. 19 ಅಥವಾ 23 ಕ್ಕೆ ಮೂಡಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ನಾಮಪತ್ರ ಸಲ್ಲಿಸಲಿದ್ದಾರೆ.
Click this button or press Ctrl+G to toggle between Kannada and English