ಮಂಗಳೂರು: ಉಡುಪಿ ಜಿಲ್ಲೆಯ ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಅವರು ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿಯವರನ್ನು ದ.ಕ ಜಿಲ್ಲೆಯ ಬಂಟ್ವಾಳದ ಮನೆಯಲ್ಲಿ ಭೇಟಿ ಮಾಡಿ ಆಶೀರ್ವಾದ ಕೋರಿದರು.
ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಕರಾವಳಿಯಲ್ಲಿ ಬಿಲ್ಲವ ಸಮುದಾಯದ ಹಿರಿಯ ಮುಖಂಡರಾಗಿದ್ದು, ಸ್ವಪಕ್ಷದಲ್ಲಿನ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿ ಸುದ್ದಿಯಾಗಿದ್ದರು.
ಬಿಲ್ಲವ ಸಮುದಾಯದಿಂದ ಬಂದ ಕಾಂಗ್ರೆಸ್ ಶಾಸಕ ವಿನಯಕುಮಾರ್ ಸೊರಕೆ ಅವರು ಪೂಜಾರಿ ಅವರ ಕಾಲಿಗೆರಗಿದರು, ಅವರಿಗೆ ಪೂಜಾರಿ ಶುಭ ಹಾರೈಸಿದರು ಎಂದು ತಿಳಿದು ಬಂದಿದೆ.
Click this button or press Ctrl+G to toggle between Kannada and English