ಮಂಗಳೂರು: ಮಂಗಳೂರು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮೇಯರ್ ಕೆ.ಅಶ್ರಫ್ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಅದಕ್ಕೂ ಮುನ್ನ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಪಕ್ಷದ ಚುನಾವಣಾ ಪ್ರಚಾರ ಸಭೆ ನಡೆಯಿತು. ಅಲ್ಲಿಂದ ರ್ಯಾಲಿ ಮೂಲಕ ನಗರಕ್ಕೆ ಆಗಮಿಸಿ ಮಿನಿ ವಿಧಾನಸೌಧದಲ್ಲಿರುವ ಚುನಾವಣಾಧಿಕಾರಿಯ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ನಾಮಪತ್ರದ ಠೇವಣಿಯನ್ನು ಜೆಡಿಎಸ್ ಅಭ್ಯರ್ಥಿ ಅಶ್ರಫ್‌ಗೆ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿ ಕೊಡಲಿದ್ದಾರೆ ಎಂದು ಈ ಹಿಂದೆ ಸಚಿವ ಯು.ಟಿ.ಖಾದರ್ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ಜೆಡಿಎಸ್ ಕಾರ್ಯಕರ್ತರು ಹಣ ಸಂಗ್ರಹಿಸಿ ಅಶ್ರಫ್‌ರ ಕೈಗಿತ್ತ ವಿದ್ಯಮಾನ ಕೂಡಾ ಈ ಸಂದರ್ಭ ನಡೆಯಿತು.
ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ನಾಯಕರಾದ ಅಬ್ದುಲ್ ಅಝೀಝ್ ಮಲಾರ್, ಹೈದರ್ ಪರ್ತಿಪ್ಪಾಡಿ ಮತ್ತಿತರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English