- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬಿಜೆಪಿಯವರು ತಾವು ಹೇಳಿದ ಮಾತಿಗೆ ಬದ್ಧರಾಗಿಲ್ಲ ಮಂಗಳೂರಿನಲ್ಲಿ ರಾಹುಲ್ ಗಾಂಧಿ

rahul-gandhi- [1]

ಮಂಗಳೂರು : ಎಐಸಿಸಿ ಅಧ್ಯಕ್ಷ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳೂರಿನಲ್ಲಿ ಬಹುನಿರೀಕ್ಷಿತ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ಮಂಗಳೂರಿನ ಟಿಎಂಎ ಪೈ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು ಮಂಗಳೂರಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲು ಖುಷಿಯಾಗುತ್ತಿದೆ. ಈ ಪ್ರಣಾಳಿಕೆಯನ್ನು ನಾಲ್ಕು ಗೋಡೆಗಳ ಮಧ್ಯೆ ಕುಳಿತ ನಾಲ್ವರು ತಯಾರಿಸಿದ್ದಲ್ಲ. ಎಲ್ಲಾ ಸಮುದಾಯಗಳನ್ನು ಕೇಳಿ ಇದನ್ನು ರಚಿಸಲಾಗಿದೆ. ನಿಮ್ಮ ಸರಕಾರ ಏನು ಮಾಡಬೇಕು ಎಂಬುದನ್ನು ಜನರಿಂದಲೇ ಕೇಳಿ ಇದನ್ನು ರಚಿಸಲಾಗುತ್ತದೆ. ಇದು “ಬಸವಣ್ಣವರ ‘ನುಡಿದಂತೆ ನಡೆ’ ಮಾತಿನಂತೆ ನಾವು ಕಳೆದ ಬಾರಿ ನೀಡಿದ ಭರವಸೆಗಳಲ್ಲಿ ಶೇಕಡಾ 90ನ್ನು ಪೂರ್ಣಗೊಳಸಿದ್ದೇವೆ. ನೀಡುವ ಭರವಸೆಗಳಿಗೆ ತೂಕ ಇರಬೇಕು ಎಂದು ನಂಬಿದವರು ನಾವು. ಅದರಂತೆ ಐದು ವರ್ಷದ ಹಿಂದೆ ನಾವು ನೀಡಿದ್ದ ಭರವಸೆಗಳನ್ನು ಇಂದು ಇಡೇರಿಸಿದ್ದೇವೆ,” ಎಂದು ರಾಹುಲ್ ಗಾಂಧಿ ಹೆಮ್ಮೆಯಿಂದ ಹೇಳಿದರು.

ಬಿಜೆಪಿಯ ಪ್ರಣಾಳಿಕೆಯನ್ನು ಕೇವಲ 3-4 ಜನ ತಯಾರಿಸಿದ್ದಾರೆ. ಅದರಲ್ಲಿ ಆರ್.ಎಸ್.ಎಸ್ ಸಿದ್ಧಾಂತವೂ ಸೇರಿಕೊಂಡಿದೆ. ಆದರೆ ನಾವು ಹಾಗಲ್ಲ. ನಾವು ಜನರನ್ನು ಕೇಳಿ ಪ್ರಣಾಳಿಕೆಯನ್ನು ರಚಿಸುತ್ತೇವೆ. ಇದು ನಮಗೂ ನಮ್ಮ ವಿರೋಧಿಗಳಿಗೂ ಇರುವ ವ್ಯತ್ಯಾಸ,” ಎಂದು ರಾಹುಲ್ ಗಾಂಧಿ ಹೇಳಿದರು.

ಬಿಜೆಪಿಯವರು ತಾವು ಹೇಳಿದ ಮಾತಿಗೆ ಬದ್ಧರಾಗಿಲ್ಲ”ಪ್ರತಿಯೊಬ್ಬರ ಖಾತಗೆ 15 ಲಕ್ಷ ನೀಡುತ್ತೇವೆ ಎಂದು ಪ್ರಧಾನಿ ಹೇಳಿದ್ದರು. ಭ್ರಷ್ಟಾಚಾರವನ್ನು ತಡೆಯುವುದಾಗಿ ಹೇಳಿದ್ದರು. 2 ಲಕ್ಷ ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಆದರೆ ಅವುಗಳನ್ನು ಯಾವುದನ್ನೂ ಇಡೇರಿಸಿಲ್ಲ. ,” ಎಂದು ಅವರು ಟೀಕಿಸಿದರು.

ಕರ್ನಾಟಕವನ್ನು ಇವತ್ತು ಸಿಲಿಕಾನ್ ವ್ಯಾಲಿಗೆ ಹೋಲಿಸುತ್ತಿದ್ದಾರೆ. ಕರ್ನಾಟಕಕ್ಕೆ ಎಲ್ಲರೂ ಬರುತ್ತಾರೆ. ಅವರನ್ನು ಕರ್ನಾಟಕದ ಜನರು ಸಹೋದರತೆಯಿಂದ ನೋಡುತ್ತಿದ್ದಾರೆ. ಕಾಂಗ್ರೆಸ್ ನಂಬಿರುವ ಪ್ರೀತಿ ಮತ್ತು ಸಹೋದರತೆಯನ್ನು ಎಲ್ಲೆಡೆ ಹರಡುತ್ತಿರುವ ಕಾಂಗ್ರೆಸಿನ ಕಾರ್ಯಕರ್ತರು ಮತ್ತು ಕನ್ನಡಿಗರಿಗೆ ನಾನು ಹೃದಯಂತರಾಳದಿಂದ ಧನ್ಯವಾದ ಹೇಳಲು ಇಚ್ಛಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.

ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್, ಕಾಂಗ್ರೆಸ್ ಹಿರಿಯ ನಾಯಕರಾದ ವೀರಪ್ಪ ಮೊಯ್ಲಿ, ಜನಾರ್ದನ್ ಪೂಜಾರಿ ಮತ್ತಿತರರು ಹಾಜರಿದ್ದರು.

rahul-gandhi-2 [2]