ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಕ್ಷಾಮ ತಲೆದೋರಿರುವ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ನಗರ ಪ್ರದೇಶದಲ್ಲಿ 1ಗಂಟೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 7ರಿಂದ 8 ಗಂಟೆ ಲೋಡ್ ಶೆಡ್ಡಿಂಗ್ ಮಾಡಲಾಗುವುದು ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಇಂದು ಶಕ್ತಿಭವನದಲ್ಲಿ ಇಂಧನ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಸಭೆ ನಂತರ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಯದ ಕುರಿತು ವಿವರಣೆ ನೀಡಿದರು.ಕಲ್ಲಿದ್ದಲು ಕೊರತೆಯಿಂದ ಇಂದಿನಿಂದಲೇ ರಾಜ್ಯಾದ್ಯಂತ ಸಂಜೆ 1ಗಂಟೆ ಪವರ್ ಕಟ್ ಮಾಡುವುದಾಗಿ ಹೇಳಿದರು. ಆದರೆ ಬೆಂಗಳೂರು ನಗರದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ ಎಂದರು. ತೆಲಂಗಾಣ ಬಿಕ್ಕಟ್ಟು ಮುಂದುವರಿದಿರುವ ಪರಿಣಾಮ ಕಲ್ಲಿದ್ದಲು ಪೂರೈಕೆಗೆ ಅಡ್ಡಿಯಾಗಿದ್ದು, ಇದರಿಂದ ವಿದ್ಯುತ್ ಕಡಿತ ಅನಿವಾರ್ಯವಾಗಿದೆ ಎಂದರು.
ಇದರಂತೆ ನಗರ ಪ್ರದೇಶದಲ್ಲಿ ಸಂಜೆ 6ರಿಂದ 10 ಗಂಟೆ ಮಧ್ಯೆ ಒಂದು ಗಂಟೆ ಕಾಲ ಪವರ್ ಕಟ್ ಮಾಡಲಾಗುವುದು. ಅಲ್ಲದೇ ಗ್ರಾಮೀಣ ಪ್ರದೇಶಗಳಲ್ಲಿ 7ರಿಂದ 8 ಗಂಟೆ ಕಾಲ ವಿದ್ಯುತ್ ಕಡಿತ ಮಾಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.
ವಿದ್ಯುತ್ ಸಮಸ್ಯೆ ಪರಿಹರಿಸುವ ಸಲುವಾಗಿ ಸಭೆಯಲ್ಲಿ ಅಧಿಕಾರಿಗಳ ಜತೆ ಚರ್ಚಿಸಲಾಯಿತು. ಹೆಚ್ಚುವರಿ ಕಲ್ಲಿದ್ದಲು ಪೂರೈಕೆ ಬಗ್ಗೆ ಕೇಂದ್ರಕ್ಕೂ ಪತ್ರ ಬರೆಯಲು ನಿರ್ಧರಿಸಲಾಗಿದೆ. ಅಲ್ಲದೇ ಕೇಂದ್ರ ಕಲ್ಲಿದ್ದಲು ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ಅವರನ್ನು ರಾಜ್ಯದ ನಿಯೋಗ ಅ.14ರಂದು ಖುದ್ದಾಗಿ ಭೇಟಿ ಮಾಡಿ ಚರ್ಚಿಸಲು ನಿರ್ಧಾರ ಕೈಗೊಂಡಿರುವುದಾಗಿ ಹೇಳಿದರು. ರಾಜ್ಯಕ್ಕೆ ಪ್ರತಿನಿತ್ಯ ಹೆಚ್ಚುವರಿಯಾಗಿ 10 ಸಾವಿರ ಟನ್ ಕಲ್ಲಿದ್ದಲು ಪೂರೈಸುವಂತೆ ಅವರನ್ನು ಕೋರಲಾಗುವುದು ಎಂದರು.
ನೆರೆಯ ಆಂಧ್ರಪ್ರದೇಶದಲ್ಲಿ ತೆಲಂಗಾಣ ಬಿಕ್ಕಟ್ಟು ಪರಿಹಾರವಾಗುವವರೆಗೂ ವಿದ್ಯುತ್ ಸಮಸ್ಯೆ ಮುಂದುವರಿಯಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ರಾಜ್ಯಕ್ಕೆ ಪ್ರತಿದಿನ ಸರಾಸರಿ 160 ದಶಲಕ್ಷ ಯೂನಿಟ್ ವಿದ್ಯುತ್ ಅಗತ್ಯವಿದೆ. ಆದರೆ ಶನಿವಾರದ ವೇಳೆಗೆ ರಾಜ್ಯದ ವಿದ್ಯುತ್ ಪೂರೈಕೆ ದಿನವೊಂದಕ್ಕೆ 136 ದಶಲಕ್ಷ ಯೂನಿಟ್ ಆಗಿತ್ತು. ಸದ್ಯದ ಸ್ಥಿತಿಯಲ್ಲಿ ಕಲ್ಲಿದ್ದಲು ಕೊರತೆ ಇರುವುದರಿಂದ ವಿದ್ಯುತ್ ಪೂರೈಕೆ ಅಸಾಧ್ಯ. ಹಾಗಾಗಿ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಿರುವುದರಿಂದ, ಸಮಯ ನಿಗದಿಪಡಿಸಿರುವುದಾಗಿ ಸಚಿವೆ ಶೋಭಾ ವಿವರಿಸಿದರು.
ಕಲ್ಲಿದ್ದಲು ಪೂರೈಕೆಯಲ್ಲಿ ಆಗಿರುವ ಕೊರತೆಯಿಂದಾಗಿ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಎಂಟು ಘಟಕಗಳ ಪೈಕಿ ಕೇವಲ ಐದು ಘಟಕಗಳಲ್ಲಿ ಮಾತ್ರ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಕೆಲವೊಮ್ಮೆ ಕೇವಲ ನಾಲ್ಕು ಘಟಕಗಳಲ್ಲಿ ವಿದ್ಯುತ್ ಉತ್ಪಾದಿಸಲಾಗುತ್ತಿದೆ ಎಂದು ತಿಳಿಸಿದರು.
Click this button or press Ctrl+G to toggle between Kannada and English
December 16th, 2011 at 10:39:34
moVUwv zcawgabjwexo, [url=http://ioqkdrokjnti.com/]ioqkdrokjnti[/url], [link=http://jipqoryltkbl.com/]jipqoryltkbl[/link], http://bbrkfyjsbvtv.com/