ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದ.ಕ. ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದ.ಕ. ವಾಲ್ಮೀಕಿ ನಾಯಕ ಅಸೋಸಿಯೇಶನ್ ಸಂಯುಕ್ತ ಆಶ್ರಯದಲ್ಲಿ ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜನ್ಮ ದಿನಾಚರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರು ಉದ್ಘಾಟಿಸಿದರು.
ವಾಲ್ಮೀಕಿ ಮಹರ್ಷಿ ಅವರು ರಾಮಾಯಣ ಗ್ರಂಥದಲ್ಲಿ ಸಾತ್ವಿಕ ಸಮಾಜ ನಿರ್ಮಾಣ ಹಾಗೂ ರಾಮ ರಾಜ್ಯದ ಕನಸನ್ನು ಬಿತ್ತಿದ್ದಾರೆ. ಮುಂದಿನ ಪೀಳಿಗೆಗೆ ಇದನ್ನು ತಿಳಿಯಪಡಿಸುವುದು ಅವಶ್ಯ. ಈ ನಿಟ್ಟಿನಲ್ಲಿ ಸರಕಾರ ವಾಲ್ಮೀಕಿ ಜನ್ಮ ದಿನಾಚರಣೆಯನ್ನು ರಾಜ್ಯಾದ್ಯಂತ ಆಚರಿಸುತ್ತಿದೆ . ಪವಿತ್ರ ರಾಮಾಯಣ ಗ್ರಂಥವನ್ನು ಜಗತ್ತಿಗೆ ನೀಡಿರುವ ಶ್ರೀ ವಾಲ್ಮೀಕಿ ಮಹರ್ಷಿ ಅವರು ವಿಶ್ವಮಾನ್ಯರಾಗಿದ್ದಾರೆ ಪಾಲೆಮಾರ್ ಹೇಳಿದರು.
ಶಾಸಕ ಯು.ಟಿ. ಖಾದರ್ ಅವರು ಮುಖ್ಯ ಅತಿಥಿಯಾಗಿದ್ದರು . ರಾಜ್ಯ ವಿಧಾನಸಭಾ ಉಪಸಭಾಧ್ಯಕ್ಷ ಎನ್. ಯೋಗೀಶ್ ಭಟ್ ಅಧ್ಯಕ್ಷತೆ ವಹಿಸಿದ್ದರು.
ದಕ್ಷಿಣ ಕನ್ನಡ ಜಿ. ಪಂ. ಉಪಾಧ್ಯಕ್ಷೆ ಧನಲಕ್ಷ್ಮಿ ಜನಾರ್ದನ, ಸಾಮಾಜಿಕ ನ್ಯಾಯ ಸ್ಥಾಯೀ ಸಮಿತಿ ಅಧ್ಯಕ್ಷ ಜನಾರ್ದನ ಗೌಡ, ತಾ.ಪಂ ಅಧ್ಯಕ್ಷೆ ಭವ್ಯಾ ಗಂಗಾಧರ ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆ ಉಪಮೇಯರ್ ಗೀತಾ ಎನ್. ನಾಯಕ್, ಜಿಲ್ಲಾಧಿಕಾರಿ ಡಾ| ಎನ್.ಎಸ್. ಚನ್ನಪ್ಪ ಗೌಡ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ| ಕೆ.ಎನ್. ವಿಜಯ ಪ್ರಕಾಶ್, ಉಪಕಾರ್ಯದರ್ಶಿ ಶಿವರಾಮೇ ಗೌಡ, ಮನಪಾ ಆಯುಕ್ತ ಡಾ| ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ದಯಾನಂದ, ದ.ಕ. ಜಿಲ್ಲಾ ವಾಲ್ಮೀಕಿ ನಾಯಕ ಅಸೋಸಿಯೇಶನ್ ಅಧ್ಯಕ್ಷ ಹಾಲೇಶಪ್ಪ ಮುಖ್ಯ ಅತಿಥಿಗಳಾಗಿದ್ದರು.
ಮಂಗಳೂರು ವಿ.ವಿ. ಪ್ರಾಧ್ಯಾಪಕ ಹಾಗೂ ಹಣಕಾಸು ಅಧಿಕಾರಿ ಡಾ| ಫಕೀರಪ್ಪ ವಾಲ್ಮೀಕಿ ಕುರಿತು ಉಪನ್ಯಾಸ ನೀಡಿದರು. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಹಲಗಪ್ಪ ಸ್ವಾಗತಿಸಿದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
Click this button or press Ctrl+G to toggle between Kannada and English