ಮಂಗಳೂರು : ದೇಶದಲ್ಲಿ ಗೋವುಗಳು ಹಾಗೂ ಮಹಿಳೆಯರು ಸುರಕ್ಷಿತರಿಲ್ಲ, ಗೋಶಾಲೆ ಹಾಗೂ ಮನೆಗಳ ಹಟ್ಟಿಯಿಂದ ಮಾರಕಾಸ್ತ್ರಗಳಿಂದ ಬೆದರಿಸಿ ಗೋವುಗಳನ್ನು ಅಪಹರಿಸಿ ಕಸಾಯಿಖಾನೆಗೆ ಸಾಗಿಸುತ್ತಿರುವುದು ಆತಂಕಕಾರಿ ಪರಿಸ್ಥಿತಿ ಎಂದು ಸಾಧ್ವಿ ಬಾಲಿಕಾ ಸರಸ್ವತಿ ಹೇಳಿದರು.
ಬದಿಯಡ್ಕ ಹಿಂದೂ ಸಮಾಜೋತ್ಸವಕ್ಕೆ ಆಗಮಿಸುವ ಅವರು ಶುಕ್ರವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ ದುಷ್ಟ ಶಕ್ತಿಗಳೊಂದಿಗೆ ರಾಷ್ಟ್ರೀಯ ಪಕ್ಷವೊಂದು ಚುನಾವಣೆಗೋಸ್ಕರ ಒಪ್ಪಂದ ಮಾಡಿಕೊಂಡಿರುವುದು ದುರದೃಷ್ಟಕರ ಈ ಬೆಳವಣಿಗೆ ಮುಂಬರುವ ದಿನಗಳಲ್ಲಿ ಹಿಂದೂಗಳ ಸ್ಥಿತಿ ಏನಾಗಲಿದೆ ಎಂಬುದನ್ನು ಸೂಚಿಸುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಚುನಾವಣೆ ಸಂದರ್ಭದಲ್ಲಿ ಎಸ್ ಡಿ ಪಿ ಐ ಯೊಂದಿಗೆ ಒಪ್ಪಂದ ಮಾಡಿಕೊಂಡಿರುವ ಕಾಂಗ್ರೆಸ್ ವಿರುದ್ಧ ಅವರು ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಸಾಧ್ವಿ ಕೆಲವರಿಗೆ ಚುನಾವಣೆ ಹತ್ತಿರ ಬರುವಾಗಲೇ ಮಂದಿರ ದೇವಾಲಯಗಳ ನೆನಪಾಗುತ್ತದೆ ಎಂದು ಹೇಳಿದರು.
Click this button or press Ctrl+G to toggle between Kannada and English