- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ

Ankitha [1]ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ದಕ್ಷಿಣ ಕನ್ನಡ ಜಿಲ್ಲೆ ಮೊದಲ  ಸ್ಥಾನವನ್ನು ಪಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಳೆದ ವರ್ಷ  ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

ಶೇ. 91.49 ಫಲಿತಾಂಶವನ್ನು ದಾಖಲಿಸಿರುವ ದಕ್ಷಿಣ ಕನ್ನಡ ಕಳೆದ ವರ್ಷ 89.92 ಫಲಿತಾಂಶವನ್ನು ದಾಖಲಿಸಿತ್ತು.

ದ.ಕ. ಜಿಲ್ಲೆ ಈ ಹಿಂದಿನ ಸತತ ಮೂರು ವರ್ಷಗಳಿಂದ ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಹ್ಯಾಟ್ರಿಕ್ ಸಾಧನೆ  ಮಾಡಿತ್ತು.  ಶೇಕಡಾವಾರು ಫಲಿತಾಂಶದಲ್ಲಿಯೂ ಕಳೆದೆರಡು ವರ್ಷಗಳಿಂದ ಏರಿಕೆಯನ್ನು ದಾಖಲಿಸಿದೆ.

2015-2016ರಲ್ಲಿ ಶೇ. 90.48 ಫಲಿತಾಂಶವನ್ನು ದಾಖಲಿಸಿತ್ತು. 2014ರಿಂದ 2016ರವರೆಗೆ ಸತತ ಮೂರು ಬಾರಿ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನವನ್ನು ಪಡೆದಿತ್ತು. 2013-2014ರಲ್ಲಿ ಶೇ. 86.04 ಫಲಿತಾಂಶ ಪಡೆದಿದ್ದ ದ.ಕ. ಜಿಲ್ಲೆ 2014-2015ನೆ ಸಾಲಿನಲ್ಲ್ಲಿ ಶೇ. 93.09 ಫಲಿತಾಂಶವನ್ನು ದಾಖಲಿಸಿತ್ತು. 2012-2013ನೆ ಸಾಲಿನಲ್ಲಿ ದಕ್ಷಿಣ ಕನ್ನಡ ದ್ವಿತೀಯ ಸ್ಥಾನದಲ್ಲಿತ್ತು.

ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಹಲವು ವರ್ಷ ಮೊದಲ ಸ್ಥಾನವನ್ನು ಪಡೆಯುತ್ತಿದ್ದ ಚಿಕ್ಕೋಡಿ ಮಾತ್ರ ಪಿಯುಸಿ ಫಲಿತಾಂಶದಲ್ಲಿ ಮತ್ತೆ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಕರ್ನಾಟಕ ಪಿಯು ಫಲಿತಾಂಶ : ಅತೀ ಹೆಚ್ಚು ಅಂಕ ಗಳಿಸಿದವರು ಜೊತೆ ಜೊತೆಗೆ ಎಂದಿನಂತೆ ನಗರ ವಿದ್ಯಾರ್ಥಿಗಳು ಗ್ರಾಮೀಣ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಫಲಿತಾಂಶ ದಾಖಲಿಸಿದ್ದರೆ, ಈ ಬಾರಿಯೂ ಫಲಿತಾಂಶದಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.