ಮಂಗಳೂರು : ಬುಧವಾರ ಮಂಗಳೂರು ನಗರ ದಕ್ಷಿಣ ಬಿಜೆಪಿ ಚುನಾವಣಾ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕ್ರೈಸ್ತ ಯುವಕರು ಬಿಜೆಪಿಯನ್ನು ಸೇರಿದರು. ಈ ಸಂದರ್ಭ ಮಾತನಾಡಿದ ಮಂಗಳೂರು ನಗರ ದಕ್ಷಿಣ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಗ್ಲಾಡ್ವೀನ್ ಡಿಸೋಜಾ ಕ್ರೈಸ್ತ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಬಾರಿ ಭಾರತೀಯ ಜನತಾ ಪಾರ್ಟಿಯನ್ನು ಬೆಂಬಲಿಸಿದ್ದಾರೆ. ಅದಕ್ಕೆ ಮುಖ್ಯ ಕಾರಣ ಕಾಂಗ್ರೆಸ್ ದುರಾಡಳಿತವನ್ನು ಕೊನೆಗಾಣಿಸುವುದು ಎಂದು ಹೇಳಿದರು.
ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಡ್ಯಾರಿನ್, ರೋಹನ್, ಅಬ್ಬಿ, ರೋಶನ್ ಮತ್ತು ಇತರರು ತಾವು ಕೇಂದ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ಆಡಳಿತ ಮತ್ತು ವಿಚಾರಧಾರೆಯಿಂದ ಪ್ರೇರೆಪಿತರಾಗಿ ಬಿಜೆಪಿಯನ್ನು ಸೇರುತ್ತಿರುವುದಾಗಿ ಹೇಳಿದರು. ನಮ್ಮ ರಾಜ್ಯದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರಬೇಕಾಗಿದೆ. ಪ್ರಧಾನ ಮಂತ್ರಿಗಳು ಹೊಂದಿರುವಂತಹ ನಿಲುವುಗಳು ಮತ್ತು ಅಭಿವೃದ್ಧಿ ದೃಷ್ಟಿಕೋನ ರಾಜ್ಯದಲ್ಲಿಯೂ ಜಾರಿಗೆ ಬರಬೇಕಾದರೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಈ ಬಾರಿ ಜಾತಿ, ಧರ್ಮ ಮೀರಿ ಎಲ್ಲರೂ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಯುವಕರು ಮನವಿ ಮಾಡಿದರು.
ಬೆಂಗರೆ ನೂರಾರು ಮುಸ್ಲಿಂ ಯುವಕರಿಂದ ಬಿಜೆಪಿ ಅಭ್ಯರ್ಥಿ ಡಿ ವೇದವ್ಯಾಸ್ ಕಾಮತ್ ರಿಗೆ ಬೆಂಬಲ
ಮಂಗಳೂರು ನಗರ ದಕ್ಷಿಣದಲ್ಲಿ ಬಿಜೆಪಿ ಬಿರುಸಿನ ಪ್ರಚಾರ ಕೈಗೊಂಡಿದೆ. ಮಂಗಳವಾರ ಬೆಂಗರೆ , ಬಿಜೈ, ಕಾಪಿಕಾಡ್ ನಲ್ಲಿ ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ಡಿ ವೇದವ್ಯಾಸ್ ಕಾಮತ್ ಕಾರ್ಯಕರ್ತರೊಂದಿಗೆ ಮತಪ್ರಚಾರ ನಡೆಸಿದರು.
ಮಂಗಳೂರು ನಗರ ದಕ್ಷಿಣದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಡಿ ವೇದವ್ಯಾಸ ಕಾಮತ್ ಅವರು ಬಿಜೈ, ಕಾಪಿಕಾಡ್ ನಲ್ಲಿ ಮತಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಂಗಳೂರಿನ ಸರ್ವಾಗಿಣ ಏಳಿಗೆಗೆ ಬಿಜೆಪಿಯನ್ನು ಬೆಂಬಲಿಸಲು ಮತದಾರರಲ್ಲಿ ಮನವಿ ಮಾಡಿದರು.
ಮಂಗಳೂರು ನಗರದ ಪ್ರಮುಖ ಅಭಿವೃದ್ಧಿ ಯೋಜನೆಯ ಹಿಂದೆ ಕೆಲಸ ಮಾಡಿರುವುದು ಬಿಜೆಪಿ. ಬಿಜೆಪಿ ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪ್ರತಿಯೊಬ್ಬ ನಾಯಕನನ್ನು ಕೂಡ ಅತ್ಯಂತ ಗೌರವಪೂರ್ಣವಾಗಿ ನಡೆಸಿಕೊಂಡು ಬಂದಿದೆ. ಆದರೆ ಬೇರೆ ಪಕ್ಷಗಳು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು, ದೇಶದ ಸಂವಿಧಾನದ ಶಿಲ್ಪಿಗಳನ್ನು ಹೇಗೆ ನಡೆಸಿಕೊಂಡಿವೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದರು. ಈ ಬಾರಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಕೇಂದ್ರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಕ್ಕೆ ತರಲು ಸುಲಭವಾಗುತ್ತದೆ ಎಂದು ಹೇಳಿದರು. ಪ್ರತಿಯೊಬ್ಬ ಕಾರ್ಯಕರ್ತ ಕೂಡ ಈ ಬಾರಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿರುವುದು ಕಂಡುಬರುತ್ತದೆ ಎಂದು ಅವರು ಹೇಳಿದರು.
Click this button or press Ctrl+G to toggle between Kannada and English