ಮಂಗಳೂರಿನಲ್ಲಿ ಮೇ 5ರಂದು ಮೋದಿ ಪ್ರಚಾರ

9:51 AM, Wednesday, May 2nd, 2018
Share
1 Star2 Stars3 Stars4 Stars5 Stars
(No Ratings Yet)
Loading...

mangaluruಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮೇ 5 ರಂದು ಸಂಜೆ 5.30ಕ್ಕೆ ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಅಂದು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು.

ಆರಂಭದಲ್ಲಿ ಮೇ 8 ರಂದು ನರೇಂದ್ರ ಮೋದಿ ಮಂಗಳೂರಿಗೆ ಬರುವ ಬಗ್ಗೆ ಮಾಹಿತಿ ಇತ್ತು. ಆದರೆ ಈಗ ಮೇ 5 ರಂದು ಮೋದಿ ಬರಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English