ಪ್ರಮಾಣವಚನ ಸ್ವೀಕರಿಸಿದ ಬಳಿಕ ರೈತರ ಸಾಲಮನ್ನಾ: ಬಿಎಸ್‌ವೈ

4:46 PM, Wednesday, May 2nd, 2018
Share
1 Star2 Stars3 Stars4 Stars5 Stars
(No Ratings Yet)
Loading...

yedeyurappaಶಿವಮೊಗ್ಗ: ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ನಿರ್ಧಾರವಾಗಿ ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್‌‌ಗಳಲ್ಲಿನ ಬೆಳೆ ಸಾಲಮನ್ನಾ ಮಾಡುತ್ತೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.

ಪ್ರೆಸ್ ಟ್ರಸ್ಟ್‌ನಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನೀರಾವರಿಗೆ ನಮ್ಮ ಸರ್ಕಾರ ವಿಶೇಷ ಆದ್ಯತೆ ನೀಡಲಿದ್ದು, 1 ಲಕ್ಷ ಕೋಟಿ ರೂ. ಹಣ ನಿಗದಿ ಮಾಡುತ್ತೇವೆ ಎಂದರು.

ಬಿಜೆಪಿ ಪ್ರಣಾಳಿಕೆಯನ್ನು ಮೇ4 ರಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗುವುದು. ಪ್ರಣಾಳಿಕೆ ಬಿಡುಗಡೆಯಾದ ಮೇಲೆ ಕನಿಷ್ಠ ಶೇ.3 ರಷ್ಟು ಬಿಜೆಪಿ ಮತಗಳು ಹೆಚ್ಚಾಗಲಿವೆ. ಮೇ 5 ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಬರುತ್ತಿದ್ದು, ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈಗಾಗಲೇ ಬಿಜೆಪಿ ಮುಖಂಡರು, ನಾಯಕರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಕಾಂಗ್ರೆಸ್‌ಗೆ ಈ ಬಾರಿ 55ಕ್ಕಿಂತ ಹೆಚ್ಚು ಸ್ಥಾನಗಳು ಬರುವುದಿಲ್ಲ, ಎರಡು ಕಡೆ ಸ್ಪರ್ಧೆ ಮಾಡುತ್ತಿರುವ ಸಿದ್ದರಾಮಯ್ಯನವರನ್ನ ಅವರ ಪಕ್ಷದವರೇ ಸೋಲಿಸಲಿದ್ದಾರೆ. ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸುವುದಕ್ಕೆ ಶ್ರೀರಾಮುಲು ಸಮರ್ಥ ಅಭ್ಯರ್ಥಿ ಎಂದರು.

ಜನಾರ್ದನ ರೆಡ್ಡಿ ಅವರನ್ನು ನಾವು ದೂರ ಇಟ್ಟಿಲ್ಲ. ಅಗತ್ಯ ಬಿದ್ದಾಗ ಅವರನ್ನು ಬಳಸಿಕೊಳ್ಳಲಾಗುತ್ತೆ ಎಂದರು. ಇನ್ನು ಜೆಡಿಎಸ್ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಬಗ್ಗೆ ದೇವೇಗೌಡರ ಮಾತಿಗೆ ಪ್ರತಿಕ್ರಿಯಿಸಿ, ದೇವೇಗೌಡರ ಬಗ್ಗೆ ಅಪಾರ ಗೌರವ ಇದೆ. ಯಾರ ಬಳಿಯೂ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English