ಚೀಟಿ ಇಲ್ಲದೇ 15 ನಿಮಿಷ ಮಾತನಾಡುವ ಚಾಲೆಂಜ್‌‌ ಸ್ವೀಕರಿಸಿ: ರಾಹುಲ್‌ಗೆ ಉಮರ್‌ ಅಬ್ದುಲ್ಲಾ ಸಲಹೆ

6:06 PM, Wednesday, May 2nd, 2018
Share
1 Star2 Stars3 Stars4 Stars5 Stars
(No Ratings Yet)
Loading...

rahul-gandhiಶ್ರೀನಗರ: ರಾಹುಲ್ ಗಾಂಧಿ ಚೀಟಿ ಇಲ್ಲದೇ ಕರ್ನಾಟಕ ಸರ್ಕಾರದ ಸಾಧನೆಯನ್ನು 15 ನಿಮಿಷ ಭಾಷಣ ಮಾಡಲಿಕ್ಕೆ ಆಗುತ್ತಾ? ವಿಶ್ವೇಶ್ವರಯ್ಯ ಹೆಸರನ್ನು 5 ಬಾರಿ ಸ್ಪಷ್ಟವಾಗಿ ಹೇಳಲು ಸಾಧ್ಯವೇ ಎಂದು ಮೋದಿ ಹಾಕಿರುವ ಬಹಿರಂಗ ಸವಾಲು ಸ್ವೀಕರಿಸಿ ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್‌ ಅಬ್ದುಲ್ಲಾ ರಾಹುಲ್‌ ಗಾಂಧಿಗೆ ಸಲಹೆ ನೀಡಿದ್ದಾರೆ.

ಕೈಯಲ್ಲಿ ಚೀಟಿ ಹಿಡಿದುಕೊಳ್ಳದೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಮಾಡಿರುವ ಸಾಧನೆಯ ಬಗ್ಗೆ ನಿಮಗೆ ತಿಳಿದಿರುವ ಹಿಂದಿ, ಇಂಗ್ಲಿಷ್‌ ಅಥವಾ ಯಾವುದೇ ಭಾಷೆಯಲ್ಲಿ ಹದಿನೈದು ನಿಮಿಷಗಳ ಮಾತನಾಡಿ ತೋರಿಸಿ, ಆಗಲೇ ಕರ್ನಾಟಕದ ಜನರು ನಿಮ್ಮ ಬಗ್ಗೆ ಒಂದು ಅಭಿಪ್ರಾಯಕ್ಕೆ ಬರುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಒಡ್ಡಿರುವ ಸವಾಲನ್ನು ಸ್ವೀಕರಿಸುವಂತೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್‌ ಅಬ್ದುಲ್ಲಾ ಸಲಹೆ ನೀಡಿದ್ದಾರೆ.

ನೀವು ಪ್ರಧಾನಿ ನರೇಂದ್ರ ಮೋದಿ ಅವರ ಈ ಸವಾಲನ್ನು ಸ್ವೀಕರಿಸಿದರೆ, ನಾವು ಎಂಟು ವರ್ಷದ ಬಾಲೆಯ ಕಥುವಾ ರೇಪ್‌ ಆ್ಯಂಡ್‌ ಮರ್ಡರ್‌ ಕೇಸ್‌ ಯಾಕೆ ಒಂದು ಸಣ್ಣ ಘಟನೆ ಎಂದು ಪ್ರಧಾನಿ ಅವರನ್ನು ಪ್ರಶ್ನೆ ಮಾಡಬಹುದು. ಆಗ ಮಾತ್ರವೇ ಪ್ರಧಾನಿ ಪ್ರಶ್ನಿಸಲು ಸಾಧ್ಯ ಎಂಬ ಅಂಶವನ್ನು ಉಮರ್‌ ಅಬ್ದುಲ್ಲಾ ರಾಹುಲ್‌ಗೆ ಸಲಹೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕರ್ನಾಟಕದ ಚಾಮರಾಜ ಜಿಲ್ಲೆಯ ಸಂತೆಮಾರನಹಳ್ಳಿಯಲ್ಲಿ ನಡೆದಿದ್ದ ಸಾರ್ವಜನಿಕ ಚುನಾವಣಾ ಪ್ರಚಾರ ಭಾಷಣದಲ್ಲಿ ರಾಹುಲ್‌ಗೆ ಈ ಬಹಿರಂಗ ಸವಾಲು ಒಡ್ಡಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English