ಶಶಿರಾಜ್ ಶೆಟ್ಟಿ ಕೊಳಂಬೆ ಸಹಿತ ನೂರಕ್ಕೂ ಅಧಿಕ ಮಂದಿ ಬಿಜೆಪಿಗೆ ಸೇರ್ಪಡೆ

2:34 PM, Thursday, May 3rd, 2018
Share
1 Star2 Stars3 Stars4 Stars5 Stars
(No Ratings Yet)
Loading...

shashirajಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತಪ್ರಚಾರ ಬಿರುಸಿನಿಂದ ಸಾಗಿದೆ. ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ಈ ಮಧ್ಯೆ, ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಶಶಿರಾಜ್ ಶೆಟ್ಟಿ ಕೊಳಂಬೆ ನೇತೃತ್ವದಲ್ಲಿ ಬಿಜೆಪಿ ಸೇರಿದರು.

ಮಂಗಳೂರು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಈ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಪಕ್ಷದ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಸೇರಿದಂತೆ ಪಕ್ಷದ ವಿವಿಧ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು.

ಪಕ್ಷಕ್ಕೆ ಸೇರ್ಪಡೆಗೊಂಡ ನಾಯಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ, ವಾರ್ಡ್ ಗಳಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English