ಮಂಗಳೂರು: ಆಹಾರ ಸಚಿವ ಯ.ಟಿ. ಖಾದರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಂಗಳೂರು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಚುರುಕು ಪಡೆದುಕೊಂಡಿದೆ. ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಖಾದರ್ ನಾಲ್ಕನೇ ಬಾರಿ ಆಯ್ಕೆಯಾಗಲು ಮತದಾರರನ್ನು ಎದುರಿಸುತ್ತಿದ್ದಾರೆ.
ಬಿಜೆಪಿಯಿಂದ ಯುವ ನಾಯಕ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬೋಳಿಯಾರ್ ಸಂತೋಷ್ ರೈ ಸ್ಪರ್ಧೆ ನಡೆಸುತ್ತಿದ್ದಾರೆ.
ಕಳೆದ ಬಾರಿ 29 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಖಾದರ್ ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳಿಂದ ಕಠಿಣ ಸ್ಪರ್ಧೆಯನ್ನು ಎದುರಿಸುತ್ತಿದ್ದಾರೆ.
ಮಂಗಳೂರು ಮೇಯರ್ ಆಗಿ ಜನಪ್ರಿಯರಾಗಿರುವ ಕೆ. ಅಶ್ರಫ್ ಈ ಬಾರಿ ಜೆಡಿಎಸ್ ನ ಹುರಿಯಾಳು. ಮಂಗಳೂರು ದಕ್ಷಿಣ ಕ್ಷೇತ್ರದ ಬದಲು ಅಲ್ಪಸಂಖ್ಯಾತರು ನಿರ್ಣಾಯಕರಾಗಿರುವ ಮಂಗಳೂರು ಕ್ಷೇತ್ರದಿಂದ ತಮ್ಮ ಅದೃಷ್ಟ ಪರೀಕ್ಷೆ ಮಾಡುತ್ತಿದ್ದಾರೆ.
ಅಶ್ರಫ್ ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರ ಜೊತೆ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದ್ದಾರೆ. ಪಕ್ಷದ ಪರ ಹಾಗೂ ವೈಯಕ್ತಿಕವಾಗಿ ತಮಗೆ ವ್ಯಾಪಕ ಬೆಂಬಲ ದೊರೆಯುತ್ತಿದೆ ಎಂದು ಅಶ್ರಫ್ ತಿಳಿಸಿದ್ದಾರೆ.
Click this button or press Ctrl+G to toggle between Kannada and English