ಮಂಗಳೂರು: ಕಾಂಗ್ರೆಸ್ನವರು ರಾಜ್ಯಸಭೆ ಸ್ಥಾನವನ್ನು ಕೊಡಬಹುದು ಎಂಬ ಆಸೆಯಿಂದ ನಟ ಪ್ರಕಾಶ್ ರೈ ಅವರು ಹಿಂದೂ ಸಮಾಜಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ದಿನಗಳಿಂದ ತಾನೊಬ್ಬ ವಿಚಾರವಾದಿ ಎಂದು ಫೋಸ್ ನೀಡುವುದಕ್ಕಾಗಿ ತಾನೊಬ್ಬ ಜಾತ್ಯಾತೀತವಾದಿ ಎಂದು ಪ್ರಚಾರ ನಡೆಸಲು ಹಿಂದೂ ಧರ್ಮವನ್ನು ಪ್ರಕಾಶ್ ರೈ ಅವಮಾನಿಸುತ್ತಿದ್ದಾರೆ. ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದರು.
ಸ್ಮಾರ್ಟ್ ಸಿಟಿ ಯೋಜನೆಗೆ ಮಂಗಳೂರು ಆಯ್ಕೆಯಾದ್ರೂ ನಿಧಾನಗತಿಯ ಕಾಮಗಾರಿ ಮಾಡುವ ಮೂಲಕ ಕಾಂಗ್ರೆಸ್ ಅಸೂಯೆಯ ರಾಜಕಾರಣ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ. ಸ್ಮಾರ್ಟ್ ಸಿಟಿಯ ಯಾವುದೇ ಸಭೆಗಳಿಗೆ ಸಂಸದರಿಗೆ ಅಹ್ವಾನ ನೀಡಿಲ್ಲ. ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ ಆದ್ರೆ ಬಿಜೆಪಿ ಸರ್ಕಾರಕ್ಕೆ ಪ್ಲಸ್ ಆಗುವ ಸಾಧ್ಯತೆಯಿಂದ ಕಾಂಗ್ರೆಸ್ ಅಸೂಯೆಯಿಂದ ನಿಧಾನಗತಿ ಕಾರ್ಯ ಮಾಡಿದೆ ಅಂತ ಹೇಳಿದ್ದಾರೆ.
Click this button or press Ctrl+G to toggle between Kannada and English