ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ರಂಗೇರಿದೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸಿರುವಂತೆಯೇ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಕೂಡ ತಮ್ಮ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ.
ಮನೆ ಮನೆ ಭೇಟಿಯ ಬಳಿಕ ಐದನೆ ಹಂತದಲ್ಲಿ ರೋಡ್ ಶೋ ನಡೆಸುವ ಮೂಲಕ ತಮ್ಮ ಪ್ರಬಲ ಜನಬೆಂಬಲವನ್ನು ಸಾಬೀತುಪಡಿಸಿದ್ದಾರೆ. ಗೌಡ ಸಾರಸ್ವತ ಬ್ರಾಹ್ಮಣ ಬಾಹುಳ್ಯದ ರಥಬೀದಿಯಲ್ಲಿ ತಮ್ಮ ಬೃಹತ್ ಪಾದಯಾತ್ರೆಯ ಅಭಿಯಾನಕ್ಕೆ ಚಾಲನೆ ನೀಡಿದ ಶ್ರೀಕರ ಪ್ರಭು ಮತದಾರರನ್ನು ಸೆಳೆಯುವ ಎಲ್ಲ ಲಕ್ಷಣಗಳನ್ನು ಪ್ರದರ್ಶಿಸಿದ್ದಾರೆ. ತಮ್ಮ ಚುನಾವಣಾ ಚಿಹ್ನೆಯಾದ ಆಟೋ ರಿಕ್ಷಾದ ಮಾದರಿಯನ್ನು ರಿಕ್ಷಾ ಚಾಲಕರಿಗೆ ನೀಡುವ ಮೂಲಕ ಶ್ರೀಕರ ಪ್ರಭು ಅಭಿಯಾನವನ್ನು ಆರಂಭಿಸಿದ್ದಾರೆ.
ಪ್ರಾರಂಭದಲ್ಲಿ ಶ್ರೀಕರ ಪ್ರಭು ಕುಟುಂಬ, ಅಭಿಮಾನಿಗಳು ರಥಬೀದಿ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿಯ ಪರ್ವದಿನದಂದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶ್ರೀ ಕರ ಪ್ರಭು ಅಭಿಮಾನಿ ಬಳಗದ ಅದ್ಯಕ್ಷ ಕೆ.ಪಿ. ಶೆಟ್ಟಿ ಬೇಡೆಮಾರ್, ಕಾರ್ಯದರ್ಶಿ ಪ್ರೇಮ್ ಚಂದ್ರ, ಉಸ್ತುವಾರಿ ಸುರೇಶ ಶೆಟ್ಟಿ, ಸಂಯೋಜಕ ಅವಿನಾಶ್ ಶೆಟ್ಟಿ, ಚಿತ್ರಕಲಾ ಪ್ರಭು, ಸೀಮಾ ಪ್ರಭು, ಐಶ್ವರ್ಯ ನಾಯಕ್, ಮಾಯಾ ನಾಯಕ್, ಶರತ್ ಅಮೀನ್, ನಿತಿನ್ ಸುವರ್ಣ, ಅಶ್ವಿತ್ ಕುಮಾರ್, ವಸಂತ್ ಪ್ರಭು, ಭಾಸ್ಕರ್ ಗಟ್ಟಿ, ಅನಿಲ್ ಕುಮಾರ್, ಆನಂದ ಶೆಟ್ಟಿ, ವೆಂಕಟರಮಣ ಮಲ್ಯ, ಜೈರಾಮ್ ಕಾಮತ್, ರಾಮ್ ಮೋಹನ್, ಮಹೇಶ್ ಭಟ್, ಸೂರಜ್ ಪ್ರಭು, ರಘುನಾಥ್ ಮತ್ತಿತರರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English