ಮೋದಿ ನಂತರ ಕಲಬುರಗಿಗೆ ಇಂದು ರಾಹುಲ್‌‌ ಭೇಟಿ..

11:19 AM, Friday, May 4th, 2018
Share
1 Star2 Stars3 Stars4 Stars5 Stars
(No Ratings Yet)
Loading...

rahul-gandhiಕಲಬುರಗಿ: ಜಿಲ್ಲೆಯಲ್ಲಿ ಸ್ಟಾರ್ ಕ್ಯಾಂಪೇನರ್ಸ್‌ ಅಬ್ಬರ ಜೋರಾಗಿದೆ. ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಆಗಮಿಸಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದರು. ಇದರ ಬೆನ್ನಲ್ಲೇ ಇಂದು ರಾಹುಲ್ ಗಾಂಧಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ.

ಚಿಂಚೋಳಿ ತಾಲೂಕಿನ ಕಾಳಗಿಗೆ 12ಗಂಟೆಗೆ ಹೆಲಿಕಾಪ್ಟರ್‌‌ ಮೂಲಕ ಬಂದಿಳಿಯಲಿರುವ ರಾಗಾ ಜಿಲ್ಲೆಯ 9 ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಸಮಾವೇಶ ಮೂಲಕ ಮತಯಾಚನೆ ಮಾಡಲಿದ್ದಾರೆ. ಇದಕ್ಕಾಗಿ ಕಾಳಗಿಯಲ್ಲಿ ಸರ್ವ ಸಿದ್ಧತೆ ಮಾಡಿಕೊಂಡಿದ್ದು, ಬೃಹತ್ ವೇದಿಕೆ ಹಾಕಲಾಗಿದೆ.

ಜಿಲ್ಲೆಯ 9 ಕ್ಷೇತ್ರಗಳಿಂದ ಜನರನ್ನು ಸೇರಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡುತ್ತಿದ್ದಾರೆ. ನಿನ್ನೆ ಮೋದಿ ಕಲಬುರಗಿಗೆ ಬಂದಾಗ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಖರ್ಗೆಯವರ ಹೆಸರು ಪ್ರಸ್ತಾಪಿಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದರು. ಇಂದು ರಾಗಾ ಯಾವ ರೀತಿ ಪ್ರತ್ಯುತ್ತರ ನೀಡಲಿದ್ದಾರೆ ಎಂಬ ಕುತೂಹಲ ಜಿಲ್ಲೆಯ ಜನರಲ್ಲಿ ಮೂಡಿದೆ. ರಾಗಾ ಆಗಮನದ ಹಿನ್ನಲೆ ಜಿಲ್ಲಾ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್‌‌ ಒದಗಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English