ಬೆಂಗಳೂರು: ಮೇ 12 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಈ ಹಿನ್ನೆಲೆ ಅಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ, ಖಾಸಗಿ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಈ ಕುರಿತು ಇಂದು ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಈ ರಜೆ ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಸೂಚಿಸಿದೆ.
ಇನ್ನು ಸರ್ಕಾರಿ ಕಚೇರಿ ಹಾಗೂ ಶಾಲೆಗಳಲ್ಲಿ ಮತಗಟ್ಟೆ ಸ್ಥಾಪಿಸಿದ್ದಲ್ಲಿ ಅಂತಹ ಕಚೇರಿ ಹಾಗೂ ಶಾಲೆಗಳಿಗೆ ಮತದಾನ ಪೂರ್ವ ದಿನ ( ಮೇ.11), ಹಾಗೂ ಮತ ಎಣೆಕೆ ನಡೆಯುವ(ಮೇ.15) ದಿನದಂದು ರಜೆ ಘೋಷಿಸುವ ಅವಶ್ಯಕತೆಯಿದ್ದಲ್ಲಿ, ಸಂಬಂಧಪಟ್ಟ ಚುನಾವಣಾಧಿಕಾರಿಗಳು ಕ್ರಮ ತೆಗೆದುಕೊಳ್ಳತಕ್ಕದ್ದು ಎಂದು ಇದೇ ವೇಳೆ ಸೂಚಿಸಿದೆ.
Click this button or press Ctrl+G to toggle between Kannada and English