ಮಂಗಳೂರು: ಮಲ್ಲಿಕಾರ್ಜುನ ಖರ್ಗೆಗೆ ಅನ್ಯಾಯ ಆಗಿದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಕೇಂದ್ರದ ಮಾಜಿ ಸಚಿವ ಆನಂದ ಶರ್ಮ ತಿರುಗೇಟು ನೀಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉನ್ನತ ಸ್ಥಾನವನ್ನು ಪಕ್ಷದಲ್ಲಿ ನೀಡಲಾಗಿದೆ. ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನವನ್ನು ನೀಡಲಾಗಿದೆ. ಆದರೆ ಮಲ್ಲಿಕಾರ್ಜುನ ಖರ್ಗೆಯ ಸ್ಥಾನಕ್ಕೆ ಸರಿಯಾದ ಮಾನ್ಯತೆಯನ್ನು ಕೇಂದ್ರ ಸರ್ಕಾರ ನೀಡಿಲ್ಲ ಎಂದರು.
ಮೋದಿಯವರು ಕನಸಿನ ಸಾಮ್ರಾಜ್ಯ ಕಟ್ಟುತ್ತಿದ್ದಾರೆ. ಅವರು ಕೇವಲ ಸುಳ್ಳುಗಳನ್ನು ಮಾತ್ರ ಮಾತನಾಡುತ್ತಾರೆ. ಮೋದಿ ಕರ್ನಾಟಕ ಜನರ ಕ್ಷಮೆ ಕೇಳಬೇಕು. ರೈತರಿಗೆ, ಯುವಕರಿಗೆ, ಮಹಿಳೆಯರಿಗೆ ಮೋದಿ ಮೋಸ ಮಾಡಿದ್ದಾರೆ ಎಂದು ದೂರಿದರು.
ಮೋದಿ ಪ್ರಚಾರ ಮಾಡುವ ಬದಲು ಕರ್ನಾಟಕದ ಜನರಲ್ಲಿ ಕ್ಷಮೆ ಕೇಳಬೇಕಾಗಿದೆ. ಯುವಕರಿಗೆ ಇನ್ನೂ ಮೋದಿ ಉದ್ಯೋಗ ದೊರಕಿಸಿಕೊಟ್ಟಿಲ್ಲ. ಪಕೋಡಾ, ಪಾನ್ ಬ್ಯುಸಿನೆಸ್ ಮಾಡಿ ಎಂದು ಮೋದಿ ಹೇಳುತ್ತಾರೆ ಎಂದು ಕಿಡಿಕಾರಿದರು.
Click this button or press Ctrl+G to toggle between Kannada and English