ಇಂದು ವರುಣಾದಲ್ಲಿ ಶಾ, ಚಾಮುಂಡೇಶ್ವರಿಯಲ್ಲಿ ಚಾಲೆಂಜಿಂಗ್‌ ಸ್ಟಾರ್‌ ಪ್ರಚಾರ

9:58 AM, Saturday, May 5th, 2018
Share
1 Star2 Stars3 Stars4 Stars5 Stars
(No Ratings Yet)
Loading...

amith-shahಮೈಸೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರ ರಂಗೇರುತ್ತಿದ್ದು, ರಾಷ್ಟ್ರ ನಾಯಕರು, ಸಿನಿಮಾ ನಟರು ಜಿಲ್ಲೆಯಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇನ್ನು ಇಂದು ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಪರ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಪ್ರಚಾರಕ್ಕಿಳಿಯಲಿದ್ದಾರೆ.

ಇಂದು ಮೈಸೂರಿನ ವರುಣಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರೋಡ್ ಶೋ ಮತ್ತು ಬಹಿರಂಗ ಸಭೆ ನಡೆಲಿದ್ದಾರೆ. ನಂತರ ಜಿಲ್ಲೆಯ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಹಾಗೂ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಬಳಿಕ ಸಂಜೆ 4 ಗಂಟೆಗೆ ಮೈಸೂರು ನಗರದ ನರಸಿಂಹರಾಜ, ಚಾಮರಾಜ ಮತ್ತು ಕೃಷ್ಣರಾಜ ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಬೇಟೆ ನಡೆಸುವ ಮೂಲಕ ನಗರದಲ್ಲಿ ಮಿಂಚಿನ ಸಂಚಾರ ನಡೆಸಲಿದ್ದಾರೆ.

ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯನವರ ಪರವಾಗಿ ಕ್ಷೇತ್ರದ 30 ಹಳ್ಳಿಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಹೀಗೆ ಜಿಲ್ಲೆಯಲ್ಲಿ ಚುನಾವಣಾ ಕಣ ಮತ್ತಷ್ಟು ರಂಗೇರಲಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English