- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳೂರಿನಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸುವ ನಮೋ ಪಕ್ಷ ಕಾರ್ಯಕರ್ತರಲ್ಲಿ ಹೊಸ ಹುರುಪು

narendra-modi [1]ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಮೇ 1ರಂದು ಉಡುಪಿಗೆ ಆಗಮಿಸಿದ್ದ ಮೋದಿ ಕಮಲ ಪಾಳಯದಲ್ಲಿ ಸಂಚಲನ ಉಂಟು ಮಾಡಿದ್ದರು. ಇದೀಗ ಮಂಗಳೂರಿನಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸುವ ನಮೋ ಪಕ್ಷ ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಲಿದ್ದಾರೆ.

ಮಂಗಳೂರಿನ ಕೇಂದ್ರ(ನೆಹರೂ) ಮೈದಾನದಲ್ಲಿ ಸಂಜೆ ಆರು ಗಂಟೆಗೆ ಮೋದಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ಕರಾವಳಿಯಲ್ಲಿ ಇದು ಅವರ ಏಕೈಕ ಕಾರ್ಯಕ್ರಮವಾಗಲಿದೆ.

ಪ್ರಧಾನಿ ನರೇಂದ್ರ ಮೋದಿಯ ಸ್ವಾಗತಕ್ಕೆ ಬಿಜೆಪಿ ವತಿಯಿಂದ ಭರ್ಜರಿ ತಯಾರಿಯನ್ನು ಮಾಡಲಾಗಿದೆ. ಈಗಾಗಲೇ ನಗರದ ಎಲ್ಲ ವಾರ್ಡ್ ಗಳಲ್ಲಿ ಸಭೆಗಳನ್ನು ಮಾಡಲಾಗಿದೆ. ದಕ್ಷಿಣ ಕನ್ನಡದ 8 ವಿಧಾನಸಭಾ ಕ್ಷೇತ್ರಗಳು ಮತ್ತು ಕೊಡಗಿನ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿ ಕಾರ್ಯಕರ್ತರು ಈ ಬೃಹತ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಜೊತೆಗೆ, ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಕಳೆದ ಬಾರಿ ಕರಾವಳಿಯಲ್ಲಿ ಬಿಜೆಪಿ ಹೀನಾಯ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಕರಾವಳಿಗೆ ಬಿಜೆಪಿ ಹೆಚ್ಚಿನ ಒತ್ತು ನೀಡಿದೆ. ಕಳಕೊಂಡ ಸ್ಥಾನಗಳನ್ನು ಮತ್ತೆ ಗಳಿಸಬೇಕೆಂಬ ನೆಲೆಯಲ್ಲಿ ಬಿಜೆಪಿ ಶತ ಪ್ರಯತ್ನದಲ್ಲಿದೆ. ಹೀಗಾಗಿ ಚುನಾವಣೆಗೆ ಒಂದು ವಾರ ಇರುವಾಗ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದೆ.

ಮೋದಿ ಸಭೆಗೆ ಕೇಂದ್ರ ಮೈದಾನದಲ್ಲಿ 50 ಅಡಿ ಎತ್ತರದ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ. ಸಂಜೆ 5.30ಕ್ಕೆ ಶಿವಮೊಗ್ಗದಿಂದ ಮಂಗಳೂರಿಗೆ ಸಭೆಯ ಬಳಿಕ ವಿಶೇಷ ವಿಮಾನ ಮೂಲಕ ನೇರವಾಗಿ ದೆಹಲಿಗೆ ತೆರಳಲಿದ್ದಾರೆ

ಮಂಗಳೂರಿನಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಭಾರೀ ವ್ಯತ್ಯಯ ಮಾಡಲಾಗಿದೆ. ವಿಮಾನ ನಿಲ್ದಾಣದಿಂದ ಮರಕಡ, ಕಾವೂರು, ಕೆಪಿಟಿ, ಕದ್ರಿ ಕಂಬಳ, ಬಂಟ್ಸ್ ಹಾಸ್ಟೆಲ್ ಮಾರ್ಗವಾಗಿ ನೆಹರೂ ಮೈದಾನದ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.