ಮಂಗಳೂರು : ವ್ಯಕ್ತಿಯೋರ್ವರನ್ನು ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಮುಲ್ಕಿ ತಾಲೂಕಿನ ಪಕ್ಷಿಕೆರೆಯ ಕೆಮ್ರಾಲ್ ನಿವಾಸಿ ಆರೋಪಿ ಮೊಹಮ್ಮದ್ ಮುಸ್ತಫಾ ಯಾನೆ ಮುಸ್ತಾ ಬಂಧಿತ ಆರೋಪಿ.
2020 ನೇ ಸಾಲಿನಲ್ಲಿ ಮುಲ್ಕಿ ವಿಜಯ ಸನ್ನಿದಿ ಹೆದ್ದಾರಿ ಬಳಿ ಹಾಡುಹಗಲಿನಲ್ಲಿ ಭೀಕರವಾಗಿ ವ್ಯಕ್ತಿಯೋರ್ವರನ್ನು ಹತ್ಯೆ ಮಾಡಿದ ಪ್ರಕರಣ ಸಂಬಂಧ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಜಾಮೀನು ರದ್ದಾದ ಬಳಿಕ ಆರೋಪಿ ಮೊಹಮ್ಮದ್ ಮುಸ್ತಫಾ ನಕಲಿ ಪಾಸ್ಪೋರ್ಟ್ ಬಳಸಿಕೊಂಡು ವಿದೇಶಕ್ಕೆ ಪರಾರಿಯಾಗಿದ್ದ. ಬಳಿಕ 2024 ರ ಎಪ್ರಿಲ್ ತಿಂಗಳಿನಲ್ಲಿ ಆರೋಪಿಯು ಅಕ್ರಮವಾಗಿ ಓಮನ್ ದೇಶದಿಂದ ಭಾರತಕ್ಕೆ ನೇಪಾಳದ ಮೂಲಕ ಅಕ್ರಮ ಪ್ರವೇಶಿಸಿದ್ದ.
ಆರೋಪಿಯ ವಿರುದ್ಧ ಸುಮಾರು ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಕೊಲೆ ಪ್ರಕರಣದಲ್ಲಿ ವಾರಂಟಿನಿಂದ ತಪ್ಪಿಸಿಕೊಂಡು ವಿಚಾರಣೆಗೆ ಹಾಜರಾಗದೇ ನುಣುಚಿಕೊಳ್ಳುತ್ತಿದ್ದ ಬಗ್ಗೆ ಹಾಗೂ ಅಕ್ರಮವಾಗಿ ವಿದೇಶ ಮತ್ತು ಭಾರತಕ್ಕೆ ಬಂದಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಅಪರಾಧ, ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









