ಹಾಸನ : ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ 21 ಜನರು ಹೃದಯಾಘಾತದಿಂದ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ತುರ್ತು ಸಭೆ ನಡೆಸಿದ್ದಾರೆ. ಈ ಸಂಬಂಧ ಸಾಂಕ್ರಾಮಿಕವಲ್ಲದ ರೋಗಗಳ (ಎನ್ಸಿಡಿ) ತಜ್ಞರ ತಂಡವು ತನಿಖೆ ನಡೆಸಿ ಶೀಘ್ರದಲ್ಲೇ ವರದಿ ಸಲ್ಲಿಸಲಿದೆ. ಇದರಲ್ಲಿ ಹೃದಯಾಘಾತಕ್ಕೆ ಕಾರಣಗಳನ್ನು ಅಧ್ಯಯನ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ತಿಳಿಸಿದ್ದಾರೆ.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದು, ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ರಾಜ್ಯ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









