ಮಂಗಳೂರು: ಸಚಿವ ರಮಾನಾಥ ರೈ ಕಾರ್ಯಕ್ರಮದಲ್ಲಿ ಮೋದಿ ಪರ ಘೋಷಣೆ ಕೂಗಲಾಗಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ.
ಬಂಟ್ವಾಳ ತಾಲೂಕಿನ ಕರೋಪಾಡಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ರಮಾನಾಥ ರೈ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕೆಲವು ಕಾರ್ಯಕರ್ತರು ಸಚಿವ ರಮಾನಾಥ ರೈ ಅವರನ್ನು ಅಡ್ಡಗಟ್ಟಿ ಮೋದಿ ಎಂದು ಘೋಷಣೆ ಕೂಗಿದ್ದಾರೆ.
ಮೋದಿ ಎಂದು ಘೋಷಣೆ ಕೂಗಿದ ವೇಳೆ ಸಚಿವ ರಮಾನಾಥ ರೈ ಏನೂ ಪ್ರತಿಕ್ರಿಯಿಸದೆ ಮೌನವಾಗಿ ನಿಂತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.
Click this button or press Ctrl+G to toggle between Kannada and English