ಬೆಂಗಳೂರು: ಕರ್ನಾಟಕದ ಸಿಎಂ ಸಿದ್ದರಾಮಯ್ಯ ಸರ್ಕಾರ 10 ಪರ್ಸೆಂಟ್ ಸರ್ಕಾರ ಎಂದು ಜರಿದಿದ್ದಕ್ಕೆ ಪ್ರತಿಯಾಗಿ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.
ರಾಜ್ಯ ಚುನಾವಣಾ ಪ್ರಚಾರದ ವೇಳೆ, ಪ್ರಧಾನಿ ಮೋದಿ ನಿರಂತರವಾಗಿ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವುಗಳಿಗೆ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಪ್ರಧಾನಿ ಬಳಸಿದ ‘ಸೀದಾ ರೂಪಯ್ಯ’ ಸರ್ಕಾರ ಎಂಬ ಪದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ವಿರುದ್ಧ ಮಾನನಷ್ಟವಾಗಿರುವ ಬಗ್ಗೆ ಲೀಗಲ್ ನೋಟಿಸ್ ನೀಡಿದ್ದಾರೆ.
ಅಷ್ಟೇ ಅಲ್ಲ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲವಾದರೆ 100 ಕೋಟಿ ರೂ, ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಲೀಗಲ್ ನೋಟಿಸ್ ಕೊಟ್ಟಿದ್ದಾರೆ.
Click this button or press Ctrl+G to toggle between Kannada and English