ಮಂಗಳೂರು: ರಾಜಕೀಯ ಪಕ್ಷಗಳು ತಮ್ಮ ತಮ್ಮ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವುದು ಮಾಮೂಲಿ. ಆದರೆ ಮಂಗಳೂರಿನಲ್ಲಿ ಇಂದು ಸಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಚ್ಚರಿ ಮೂಡಿಸಿದರು.
ಸಿಪಿಐ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ಮಂಗಳೂರಿಗೆ ಬಂದಿದ್ದ ಸಿಪಿಐ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಾಗೇಪಲ್ಲಿ ಮತ್ತು ಗುಲ್ಬರ್ಗಾದಲ್ಲಿ ಸಿಪಿಎಂ ಪಕ್ಷಕ್ಕೆ ಸಿಪಿಐ ಬೆಂಬಲ ಸೂಚಿಸಿದೆ. ಸಿಪಿಐ ಸ್ಪರ್ಧಿಸದಿರುವ ಇತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಪಿಐ ಬೆಂಬಲ ಸೂಚಿಸಲಾಗಿದೆ. ಅತಂತ್ರ ವಿಧಾನಸಭೆ ನಿರ್ಮಾಣವಾದರೆ ಜೆಡಿಎಸ್ ಬಿಜೆಪಿ ಮೈತ್ರಿ ಮಾಡಬಹುದು. ಆದುದರಿಂದ ಜೆಡಿಎಸ್ ಪಕ್ಷಕ್ಕೆ ಸಿಪಿಐ ಬೆಂಬಲ ನೀಡುವುದಿಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ ಕುಕ್ಯಾನ್, ಕಾಂಗ್ರೆಸ್ ಜಿಲ್ಲಾ ಪ್ರ.ಕಾರ್ಯದರ್ಶಿ ಸಂತೋಷ್ ಕುಮಾರ್ ಜೊತೆಗಿದ್ದರು.
Click this button or press Ctrl+G to toggle between Kannada and English