ಮಂಗಳೂರು: ಸುಳ್ಳನ್ನು ಸತ್ಯ ಎಂದು ಬಿಂಬಿಸುವುದು ಬಿಜೆಪಿ ಗರಗತವಾಗಿದೆ. ಆದುದರಿಂದ ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡದೆ ಅಭಿವೃದ್ಧಿಯನ್ನು ಪರಿಗಣಿಸಿ ಮತ ಚಲಾಯಿಸಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎ. ಮೊಹಿಯುದ್ದೀನ್ ಬಾವಾ ಹೇಳಿದ್ದಾರೆ.
ಕೂಳೂರಿನ ಪೇಟೆಯಲ್ಲಿ,ಪಂಜಿಮೊಗರು ಸೇರಿದಂತೆ ವಿವಿಧೆಡೆ ಸೋಮವಾರ ಮಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಮೊದಿನ್ ಬಾವಾ ಬಿರುಸಿನ ಮತಯಾಚನೆ ನಡೆಸಿದರು.
ಮನೆ, ವ್ಯಾಪಾರ ಕೇಂದ್ರ, ಕಂಪನಿಗಳಿಗೆ ಭೇಟಿ ನೀಡಿ ಸರಕಾರ ಕೈಗೊಂಡ ಕಲ್ಯಾಣ ಕಾರ್ಯಕ್ರಮವನ್ನು ವಿವರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ನುಡಿದಂತೆ ನಡೆದಿದೆ. 159 ಪ್ರಣಾಳಿಕಾ ಭರವಸೆಗಳನ್ನು ಈಡೇರಿಸಿದೆ. ಈ ಬಾರಿಯೂ ಪ್ರಣಾಳಿಕೆಯಲ್ಲಿ ಜನ ಪರ ,ಬಡ ವರ್ಗದ ಏಳಿಗೆಗಾಗಿ ಹಲವು ಯೋಜನೆ ಪ್ರಕಟಿಸಿದೆ ಎಂದರು. ಮತದಾರರು ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಯೋಜನೆಗಳಿಂದ ಸಂತುಷ್ಟರಾಗಿದ್ದು ಈ ಬಾರಿಯೂ ಪಕ್ಷವನ್ನುಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಸೊಹೈಲ್ ಕಂದಕ್, ಕೆ.ಸದಾಶಿವ ಶೆಟ್ಟಿ ,ಕೂಳೂರು ವಾರ್ಡ್ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
Click this button or press Ctrl+G to toggle between Kannada and English