ಮಂಗಳೂರು: ರಾಜ್ಯ ವಿಧಾನಸಭೆಗೆ ಮೇ 12ರಂದು ನಡೆಯುವ ಚುನಾವಣೆಯ ವೇಳೆ ಶಾಂತಿಯುತ ಮತದಾನಕ್ಕೆ ಅಗತ್ಯ ಕ್ರಮಗಳನ್ನು ಪೊಲೀಸ್ ಇಲಾಖೆಯ ವತಿಯಿಂದ ಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಫುಲ್ ಕುಮಾರ್ ತಿಳಿಸಿದ್ದಾರೆ.
ಇಂದು ಬೆಳಗ್ಗೆ ತನ್ನ ಕಚೇರಿಯಲ್ಲಿ ಸುದ್ದಿಗೋಷಿಯಲ್ಲಿ ಮಾತನಾಡಿದ ಅವರು, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ ಒಳಪಡುವ ಮಂಗಳೂರು, ಮಂಗಳೂರು ನಗರ ಉತ್ತರ, ಮಂಗಳೂರು ದಕ್ಷಿಣ ಹಾಗೂ ಮೂಡುಬಿದಿರೆ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 877 ಬೂತ್‌ಗಳಿವೆ. ಈ ಪೈಕಿ 676 ಬೂತ್‌ಗಳನ್ನು ಕ್ಲಿಷ್ಟಕರ ಎಂದು ಗುರುತಿಸಲಾಗಿದೆ. 26 ಚೆಕ್‌ಪೋಸ್ಟ್‌ಗಳನ್ನು ರಚಿಸಲಾಗಿದ್ದು, ಇದರಲ್ಲಿ ಆರು ಅಂತರ್‌ರಾಜ್ಯ ಗಡಿಭಾಗದಲ್ಲಿ ಬರುತ್ತವೆ. 14 ಫ್ಲೈಯಿಂಗ್ ಸ್ಕ್ವ್ಯಾಡ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಭದ್ರತೆಗಾಗಿ 11 ಸಿಎಪಿಎಫ್ ತುಕಡಿ, ಪಿಎಪಿ, ಹೋಂಗಾರ್ಡ್ ಸಹಿತ 2,700 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದವರು ಹೇಳಿದರು.
ಚುನಾವಣೆಯ ಹಿನ್ನೆಲೆಯಲ್ಲಿ 1,908 ಶಸ್ತ್ರಾಸ್ತ ಠೇವಣಿ, 753 ಸೆಕ್ಯುರಿಟಿ ಕೇಸ್ ದಾಖಲಾಗಿವೆ. 2,756 ರೌಡಿಗಳ ಮೇಲೆ ಕಣ್ಗಾವಲು ಇಡಲಾಗಿದೆ. ಇದಲ್ಲದೆ, ಸಮಾಜಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಹ 90 ಮಂದಿಯ ಮೇಲೂ ನಿಗಾ ಇಡಲಾಗಿದೆ ಎಂದು ಆಯುಕ್ತರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಹನುಮಂತರಾಯ, ಉಮಾ ಪ್ರಶಾಂತ್ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English