ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಈಗಾಗಲೇ ಒಳಒಪ್ಪಂದ ಮಾಡಿಕೊಂಡಿವೆ: ಐವನ್ ಡಿಸೋಜ

1:22 PM, Thursday, May 10th, 2018
Share
1 Star2 Stars3 Stars4 Stars5 Stars
(No Ratings Yet)
Loading...

ivan-desouzaಮಂಗಳೂರು: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಈಗಾಗಲೇ ಒಳಒಪ್ಪಂದ ಮಾಡಿಕೊಂಡಿವೆ. ಚುನಾವಣೆಯ ಬಳಿಕ ಒಳಒಪ್ಪಂದ ಮಾಡಿಕೊಳ್ಳಬೇಕಾದ ಈ ಎರಡು ಪಕ್ಷಗಳು ಚುನಾವಣಾ ಪೂರ್ವದಲ್ಲೇ ಒಳ ಒಪ್ಪಂದ ಮಾಡಿಕೊಳ್ಳುವ ಮೂಲಕ ಜನತೆಗೆ ಅನ್ಯಾಯ ಎಸಗಿದೆ. ಅವರ ಈ ತಂತ್ರ ಚುನಾವಣೆಯಲ್ಲಿ ಫಲಿಸುವುದಿಲ್ಲ. ಈ ಬಾರೀ ಕಾಂಗ್ರೆಸ್ ಪಕ್ಷ 130ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದ್ದು, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದ್ದಾರೆ.

ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯ ಹಿನ್ನೆಲೆಯಲ್ಲಿ ತಾನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಎಲ್ಲ ಕಡೆಯೂ ಕಾಂಗ್ರೆಸ್ ಪರವಾದ ಅಲೆ ಇದೆ. ವಿಶೇಷವಾಗಿ ಅನ್ನಭಾಗ್ಯ ಯೋಜನೆ ಕಾಂಗ್ರೆಸ್‌ಗೆ ಈ ಬಾರಿ ವರದಾನವಾಗಿ ಪರಿಣಮಿಸಲಿದೆ ಎಂದರು.

ರಾಜ್ಯದ ಎಲ್ಲಾ ಕಡೆಯೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣೆ ಇದೆ. ಕೆಲವೆಡೆ ಮಾತ್ರ ತ್ರಿಕೋನ ಸ್ಪರ್ಧೆ ಕಂಡುಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿ ಬೇರೆ ಬೇರೆ ಪ್ರದೇಶಗಳಲ್ಲಿ ಭಾಷಣ ಮಾಡುವ ವೇಳೆ ಒಂದೊಂದು ರೀತಿಯ ಸಮಸ್ಯೆಗಳಿವೆ ಎಂದು ಹೇಳುತ್ತಿದ್ದಾರೆ. ಆದರೆ ಪ್ರಧಾನಿಯಾಗಿ ಅವರು ಏನು ಮಾಡಿದ್ದಾರೆ ಎಂದು ಐವನ್ ಪ್ರಶ್ನಿಸಿದರು.

ಕರಾವಳಿಯ ಮೂರು ಜಿಲ್ಲೆಗಳಾದ ದ.ಕ., ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಒಟ್ಟು 19 ಸ್ಥಾನಗಳಲ್ಲಿ 15ನ್ನು ಕಾಂಗ್ರೆಸ್ ಪಕ್ಷ ಗೆಲ್ಲಲಿದೆ. ಕರಾವಳಿಯಲ್ಲಿ ಶೇ.14 ಮುಸ್ಲಿಮರು, ಶೇ.3ರಷ್ಟು ಕ್ರೈಸ್ತರಿದ್ದಾರೆ. ಆದರೆ ಬಿಜೆಪಿ ಮತ್ತು ಜೆಡಿಎಸ್ ಒಬ್ಬನೇ ಒಬ್ಬ ಕ್ರೈಸ್ತ ಅಭ್ಯರ್ಥಿಗೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಿಲ್ಲ. ಆದ್ದರಿಂದ ಈ ಬಾರಿ ಕ್ರೈಸ್ತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಐವನ್ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English