ಬೆಂಗಳೂರು: ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಂಡಮಾರುತ ಅಪ್ಪಳಿಸಿದ್ದು, ಮುಂದಿನ ಐದು ದಿನಗಳ ಕಾಲ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಐದು ದಿನಗಳ ಕಾಲ ಓಡಿಶಾ, ಆಸ್ಸೋಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕರಾವಳಿ ಹಾಗೂ ಉತ್ತರ ಕರ್ನಾಟಕದ ಹಲವು ಭಾಗ, ತಮಿಳುನಾಡು ಹಾಗೂ ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದರ ಮಧ್ಯೆ ಮೇ 12ರಂದು (ಶನಿವಾರ) ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಂದು ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮತದಾನದ ದಿನದಂದು ಮಧ್ಯಾಹ್ನದ ಬಳಿಕ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನಗಳ ಕಾಲವೂ ರಾಜ್ಯದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.
ಶನಿವಾರದಂದು ಮತದಾರರು ಆದಷ್ಟು ಬೇಗ ಮತದಾನ ಮಾಡುವಂತೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕ ಶ್ರೀನಿವಾಸ್ ರೆಡ್ಡಿಯವರು ಹೇಳಿದ್ದಾರೆ.
Click this button or press Ctrl+G to toggle between Kannada and English