ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು ಮತಗಟ್ಟೆಗೆ ತೆರಳಲು ಅಧಿಕಾರಿಗಳು ಸಿದ್ಧಗೊಂಡಿದ್ದಾರೆ.
ಇವಿಎಂ ಮಷಿನ್‌ಗಳ ಬಾಕ್ಸ್‌ಗಳನ್ನು ಸಂಬಂಧಪಟ್ಟ ಮತಗಟ್ಟೆ ಅಧಿಕಾರಿಗಳು ಮತಗಟ್ಟೆಗೆ ಕೊಂಡೊಯ್ಯುತ್ತಿದ್ದಾರೆ. ಮತದಾನದ ಸಂದರ್ಭದಲ್ಲಿ ಯಾವುದೇ ಚ್ಯುತಿ ಬಾರದಂತೆ ಜಿಲ್ಲಾ ಚುನಾವಣಾ ಆಯೋಗ ನಿಗಾ ವಹಿಸಿದೆ.
ದ.ಕ. ಜಿಲ್ಲೆಯಲ್ಲಿ 12,837 ಮತಗಟ್ಟೆ ಅಧಿಕಾರಿಗಳು, 1,295 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಲಿದ್ದಾರೆ. ಜಿಲ್ಲೆಯ 8 ಕ್ಷೇತ್ರಗಳಿಗೆ 13,176 ಮತಗಟ್ಟೆ ಸಿಬ್ಬಂದಿ ನೇಮಕ ಮಾಡಲಾಗಿದೆ.
ಚುನಾವಣಾ ಕರ್ತವ್ಯ ಮುಕ್ತಾಯವಾದ ಬಳಿಕ ಡಿಮಸ್ಟರಿಂಗ್ ಕೇಂದ್ರಕ್ಕೆ ಕರೆತರಲು 648 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ದ.ಕ. ಜಿಲ್ಲೆಯಲ್ಲಿ 17,11,848 ಮತದಾರರಿದ್ದು 8,70,675 ಮಹಿಳಾ ಮತದಾರರು ಹಾಗೂ 8,41,073 ಪುರುಷ ಮತದಾರರು ಇದ್ದಾರೆ.
Click this button or press Ctrl+G to toggle between Kannada and English