ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

12:06 PM, Saturday, May 12th, 2018
Share
1 Star2 Stars3 Stars4 Stars5 Stars
(No Ratings Yet)
Loading...

Anni Acharyaಬೆಳ್ತಂಗಡಿ :  ತಾಲೂಕಿನ ಅಂಡಿಜೆ ಗ್ರಾಮದ ಶಾಲೆಯಲ್ಲಿ ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಜಾರಿಗೆದಡಿ ನಿವಾಸಿ ಅಣ್ಣಿ ಅಚಾರ್ಯ(70) ಹೃದಯಾಘಾತದಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮತದಾನ ಮಾಡಲು ತೆರಳಿದ್ದ ಶಾಲೆಯ ಮುಂಭಾಗದಲ್ಲಿ ಹೃದಯಘಾತವಾಗಿ ಕುಸಿದುಬಿದ್ದು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English