ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನ ಸುಳ್ಯ ಕ್ಷೇತ್ರದಲ್ಲಿ ಅತೀ ಹೆಚ್ಚು ಮತದಾನ

11:38 AM, Sunday, May 13th, 2018
Share
1 Star2 Stars3 Stars4 Stars5 Stars
(No Ratings Yet)
Loading...

vote ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಎಂಟು ಕ್ಷೇತ್ರಗಳಲ್ಲಿ ಶನಿವಾರ ಬಿರುಸಿನ ಹಾಗೂ ಶಾಂತಿಯುತ ಮತದಾನವಾಗಿದ್ದು ಸಂಜೆಯ ವೇಳೆಗೆ  ಶೇ. 77.63ರಷ್ಟು ಮತದಾನ ದಾಖಲಾಗಿದೆ.

ಬೆಳಗ್ಗೆ 7 ಗಂಟೆಗೆ ಮತ ದಾರರು ಬಹಳ ಉತ್ಸುಕತೆಯಿಂದ ಸರದಿಯಲ್ಲಿ ನಿಂತಿದ್ದ ದೃಶ್ಯ ಬಹುತೇಕ ಎಲ್ಲ ಮತಗಟ್ಟೆಗಳಲ್ಲಿಯೂ ಕಂಡು ಬಂದಿತ್ತು. ಕೆಲವು ಮತಗಟ್ಟೆಗಳಲ್ಲಿ ಮುಂಜಾನೆ 6.45ರ ವೇಳೆಗೇ ಮತದಾರರು ತಮ್ಮ ಹಕ್ಕು ಚಲಾಯಿಸುವುದಕ್ಕೆ ಬಂದು ಕಾದು ಕುಳಿತದ್ದು ವಿಶೇಷ. 2013ಕ್ಕಿಂತ ಈ ಬಾರಿ ಶೇ. 3.25ರಷ್ಟು ಅಧಿಕ ಮತದಾನವಾಗಿದೆ.

ಈ ಬಾರಿ ವಿ.ವಿ. ಪ್ಯಾಟ್‌ ವ್ಯವಸ್ಥೆ ಅಳವಡಿಸಿದ್ದ ಕಾರಣಕ್ಕೆ ಮತದಾನ ಪ್ರಕ್ರಿಯೆ ಕೊಂಚ ತಡವಾಗಿತ್ತು. ಜಿಲ್ಲೆಯ ಬಹುತೇಕ ಎಲ್ಲ ಮತ ಗಟ್ಟೆಗಳಲ್ಲಿ ಮಧ್ಯಾಹ್ನದ ವೇಳೆಗೆ ಶೇ.50ಕ್ಕಿಂತ ಅಧಿಕ ಮತದಾರರು ಮತ ಚಲಾಯಿಸಿದ್ದು ಮತ್ತೂಂದು ವಿಶೇಷ. ಮಧ್ಯಾಹ್ನದ ಬಳಿಕ ಮತದಾನ ಮಂದ ಗತಿಯಲ್ಲೇ ಸಾಗಿತ್ತು.

ಮತಯಂತ್ರ ಸಂಬಂಧ 24 ಕಂಟ್ರೋಲ್‌ ಯೂನಿಟ್‌, 21 ಬ್ಯಾಲೆಟ್‌ ಯೂನಿಟ್‌ ಹಾಗೂ 42 ವಿವಿ ಪ್ಯಾಟ್‌ಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ತತ್‌ಕ್ಷಣ ತಂತ್ರಜ್ಞ ರನ್ನು ಕರೆಸಿ ಅವುಗಳನ್ನು ಬದಲಾಯಿಸಿ ಮತದಾನ ಮುಂದುವರಿಕೆ ಅವಕಾಶ ಮಾಡಿಕೊಡಲಾಯಿತು.

vote ಬೆಳ್ತಂಗಡಿ ಕ್ಷೇತ್ರದಲ್ಲಿ ಒಟ್ಟು ಶೇ.81.40, ಮೂಡಬಿದಿರೆಯಲ್ಲಿ ಶೇ.75.41, ಮಂಗಳೂರು ದಕ್ಷಿಣದಲ್ಲಿ ಶೇ.67.47, ಮಂಗಳೂರು ಉತ್ತರ ಕ್ಷೇತ್ರದಲ್ಲಿ ಶೇ.74.55, ಮಂಗಳೂರು ಕ್ಷೇತ್ರದಲ್ಲಿ ಶೇ.75.73, ಬಂಟ್ವಾಳ ಕ್ಷೇತ್ರದಲ್ಲಿ ಶೇ.81.89, ಪುತ್ತೂರು ಕ್ಷೇತ್ರದಲ್ಲಿ ಶೇ.81.70 ಹಾಗೂ ಸುಳ್ಯ ಕ್ಷೇತ್ರದಲ್ಲಿ ಶೇ.83.00 ಮತದಾನ ದಾಖಲಾಗಿದೆ. ಮತದಾನ ಪ್ರಮಾಣ ನೋಡಿದರೆ, ಅತೀ ಹೆಚ್ಚು ಮತದಾನ ಸುಳ್ಯ ಕ್ಷೇತ್ರದಲ್ಲಿ ಹಾಗೂ ಅತೀ ಕಡಿಮೆ ಮತದಾನ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಆಗಿದೆ.

ಮತದಾರರು ನೀಡಿದ ತೀರ್ಪು ಮತ ಯಂತ್ರಗಳಲ್ಲಿ ಭದ್ರವಾಗಿದ್ದು, ಕಣದಲ್ಲಿದ್ದ 58 ಮಂದಿಯ ಭವಿಷ್ಯ ಮೇ 15ರಂದು ಪ್ರಕಟವಾಗಲಿದೆ.

vote

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English