ಬಿಜೆಪಿಗೆ ಅವಕಾಶ ಕೊಟ್ಟರೆ ಇದರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ: ಸಿದ್ದರಾಮಯ್ಯ

3:24 PM, Wednesday, May 16th, 2018
Share
1 Star2 Stars3 Stars4 Stars5 Stars
(No Ratings Yet)
Loading...

congress-partyಬೆಂಗಳೂರು: ಸಂಖ್ಯಾಬಲದ ಆಧಾರದ ಮೇಲೆ ಸರ್ಕಾರ‌‌ ರಚನೆಗೆ ಜೆಡಿಎಸ್ ಮತ್ತು ಕಾಂಗ್ರೆಸ್‌ಗೆ ರಾಜ್ಯಪಾಲರು ಅವಕಾಶ ಕೊಡಬೇಕು. ಒಂದು ವೇಳೆ ಬಿಜೆಪಿಗೆ ಅವಕಾಶ ಕೊಟ್ರೆ ಅದು ಸಂವಿಧಾನ‌ ವಿರೋಧಿ ಕ್ರಮ ಎಂದು ನಿರ್ಗಮಿತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಾಸಕಾಂಗ ಸಭೆ ಬಳಿಕ ಮಾತನಾಡಿದ ಅವರು, ಬಿಜೆಪಿಗೆ ಅವಕಾಶ ಕೊಟ್ಟರೆ ಇದರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ. ಸಂವಿಧಾನ ನಿಯಮಾವಳಿಗಳಂತೆ ನಡೆದುಕೊಳ್ಳಬೇಕು. ಸಂವಿಧಾನ ಬಾಹಿರವಾಗಿ ನಡೆದುಕೊಂಡರೆ ಹುದ್ದೆಗೆ ಗೌರವ ಇರಲ್ಲ. ಬಿಜೆಪಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ. ಆದರೆ ನಮ್ಮ ಶಾಸಕರು ಒಂದಾಗಿದ್ದೇವೆ ಎಂದರು.

ಎಲ್ಲಾ ಶಾಸಕರು ನಮ್ಮ ಜೊತೆಗಿದ್ದಾರೆ. ಬಿಜೆಪಿ ಕುದುರೆ ವ್ಯಾಪರ ಮಾಡುತ್ತಿದ್ದು, ಈಗಾಗಲೇ ಫಲಿತಾಂಶದಲ್ಲಿ ಕೈ ಸುಟ್ಟುಕೊಂಡಿದೆ. ಮತ್ತೆ ಕುದುರೆ ವ್ಯಾಪರಕ್ಕೆ ಮುಂದಾದರೆ, ಮತ್ತೆ ಕೈ ಸುಟ್ಟುಕೊಳ್ಳಲಿದೆ ಎಂದು ಕಾಂಗ್ರೆಸ್‌ ಮುಖಂಡ ಮಾಜಿ ಸಚಿವ ಹೆಚ್‌‌.ಕೆ.ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

ಅತಂತ್ರ ವಿಧಾನಸಭೆಯಿಂದಾಗಿ ರಾಜ್ಯ ರಾಜಧಾನಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು ನಗರದಲ್ಲಿ ಈ ಬಗ್ಗೆ ಹೇಳಿಕೆ ನೀಡಿದ ಅವರು, ಬಿಜೆಪಿ ವರ್ತನೆಗೆ ರಾಜ್ಯದ ಜನ ಕ್ಷಮಿಸೋದಿಲ್ಲ. ಇಲ್ಲಿಯವರೆಗೆ ನಡೆಸ ಸಭೆಯಲ್ಲಿ ಬಹಳಷ್ಟು ವಿಚಾರ ಚರ್ಚೆ ಆಗಿದೆ. ಜೆಡಿಎಸ್‌‌ಗೆ ಬೆಂಬಲ ನೀಡಬೇಕೆಂಬ ತೀರ್ಮಾನಕ್ಕೆ ಬಂದಿದ್ದೇವೆ. ಕಾಂಗ್ರೆಸ್‌‌‌ನ ಶಾಸಕರು ಕುದುರೆ ವ್ಯಾಪರದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯಪಾಲರು ಕಾನೂನು ಬಿಟ್ಟು ಹೋಗಬಾರದು. ಕಾನೂನಿನ ಪ್ರಕಾರ ಸರ್ಕಾರ ರಚನೆಗೆ ಅವಕಾಶ ನೀಡಬೇಕು. ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಬಾರದು. ಸಂವಿಧಾನದ ಪ್ರಕಾರ ನಡೆಯಬೇಕು. ಅದೇ ಪ್ರಕಾರ ನಡೆಸುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English