ಬೆಂಗಳೂರು: ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಬಿ.ಎಸ್.ಯಡಿಯೂರಪ್ಪ ಅವರು ರೈತರ ಸಾಲಮನ್ನಾ ಮಾಡುವ ಕಡತಕ್ಕೆ ಸಹಿ ಹಾಕಿದ್ದಾರೆ. ಈ ಮೂಲಕ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯನ್ನು ಈಡೇರಿಸಿದ್ದಾರೆ.
ರಾಜ್ಯದ ನೂತನ ಸಿಎಂ ಆಗಿ ಪದಗ್ರಹಣದ ಬಳಿಕ ವಿಧಾನಸೌಧಕ್ಕೆ ಆಗಮಿಸಿದ ಬಿಎಸ್ವೈ, ಅಧಿಕಾರಗಳ ಜೊತೆ ಸಭೆ ನಡೆಸಿದರು. ಬಳಿಕ ರೈತರ ಒಂದು ಲಕ್ಷ ರೂ. ಕೃಷಿ ಸಾಲಮನ್ನಾ ಮಾಡುವ ಕಡತಕ್ಕೆ ಸಹಿ ಹಾಕಿದರು.
ಚುನಾವಣೆಗೂ ಮುನ್ನ ಹಲವು ಬಾರಿ ಸಿಎಂ ಆದ ದಿನವೇ ರೈತರ ಸಾಲ ಮನ್ನಾ ಮಾಡುವುದಾಗಿ ರಾಜ್ಯದ ಜನತೆಗೆ ಮಾತು ಕೊಟ್ಟಿದ್ದರು.
Click this button or press Ctrl+G to toggle between Kannada and English