ಮಂಗಳೂರು: ರಾಜ್ಯದಲ್ಲಿ ಹೊಸ ಸರಕಾರ ರಚನೆ ಕುರಿತಂತೆ ಬೆಂಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್-ಜೆಡಿಎಸ್ ಸರ್ಕಸ್ ನಡೆಯುತ್ತಿದ್ದರೆ, ಕರಾವಳಿಯಲ್ಲಿ ಸಚಿವ ಸ್ಥಾನ ಯಾರಿಗೆ ಎಂಬ ಲೆಕ್ಕಾಚಾರ ಶುರುವಾಗಿದೆ.
ಬಿಜೆಪಿ ಸರಕಾರ ರಚನೆಯಾದರೆ, ದಕ್ಷಿಣ ಕನ್ನಡದಲ್ಲಿ 7 ಸ್ಥಾನ ಹಾಗೂ ಉಡುಪಿ ಜಿಲ್ಲೆಯಲ್ಲಿ 5 ಸ್ಥಾನಗಳನ್ನು ಗೆದ್ದು ಕೊಂಡಿರುವ ಹಿನ್ನೆಲೆ ಯಲ್ಲಿ ಕನಿಷ್ಠ ನಾಲ್ಕು ಸಚಿವ ಸ್ಥಾನ ಸಿಗುವ ಸಾಧ್ಯತೆಗಳಿವೆ ಎಂಬ ಮಾತು ಕೇಳಿ ಬರುತ್ತಿದೆ. ದಕ್ಷಿಣ ಕನ್ನಡದಲ್ಲಿ ಆರು ಶಾಸಕರದು ಹೊಸ ಮುಖ. ಹೀಗಾಗಿ 6ನೇ ಬಾರಿಗೆ ಆಯ್ಕೆಯಾದ ಎಸ್. ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಿದೆ.
ಇನ್ನೊಂದೆಡೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರಕಾರ ರಚನೆಯಾದರೂ ಕರಾವಳಿಗೆ ಇಲ್ಲದಿದ್ದರೂ ದಕ್ಷಿಣ ಕನ್ನಡ ಜಿಲ್ಲೆ ಲಾಭದ ನಿರೀಕ್ಷೆಯಲ್ಲಿದೆ.
ಕಾಂಗ್ರೆಸ್‌ನಿಂದ ಯು.ಟಿ. ಖಾದರ್ ಅವರು ಮಾತ್ರ ಆಯ್ಕೆಯಾಗಿದ್ದು, ಅವರಿಗೆ ಸಚಿವ ಸ್ಥಾನ ಖಚಿತ ಎಂಬ ಅಭಿಪ್ರಾಯ ಇದೆ. ಇದರ ಮಧ್ಯೆ ಕರಾವಳಿ ಭಾಗಕ್ಕೆ ಸೇರಿರುವ ಜೆಡಿಎಸ್ ಮಹಾಪ್ರಧಾನ ಕಾರ್ಯದರ್ಶಿ, ಎಚ್.ಡಿ. ದೇವೆಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿಯವರಿಗೆ ಅಪ್ತರಾದ ಬಿ.ಎಂ.ಫಾರೂಕ್‌ಗೆ ಅವಕಾಶ ಸಿಗುವ ಸಾಧ್ಯತೆಯೂ ಇದೆ. ಫಾರೂಕ್ ಅವರು ರಾಜ್ಯಸಭೆಗೆ ಹಾಗೂ ರಾಜ್ಯಸಭೆಗೆ ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.
ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಚುನಾವಣಾ ಕಾರ್ಯತಂತ್ರ ರೂಪಿಸುವ ತಂಡದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಸಚಿವ ಸ್ಥಾನ ನೀಡಬಹುದೆಂಬ ಚರ್ಚೆ ಸ್ಥಳೀಯ ಕಾಂಗ್ರೆಸ್-ಜೆಡಿಎಸ್ ವಲಯದಲ್ಲಿದೆ.
Click this button or press Ctrl+G to toggle between Kannada and English