ಭಾರತವನ್ನು ಪಾಕಿಸ್ತಾನಕ್ಕೆ ಹೋಲಿಸಿದ ರಾಹುಲ್ ಗಾಂಧಿ

2:40 PM, Thursday, May 17th, 2018
Share
1 Star2 Stars3 Stars4 Stars5 Stars
(No Ratings Yet)
Loading...

rahul-gandhiಹರ್ಯಾಣ : ಹರ್ಯಾಣದಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾರತವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ.

“ಭಾರತದಲ್ಲಿ ಭಯ ಮತ್ತು ಅಭದ್ರತೆಯ ವಾತಾವರಣ ತಲೆದೂರಿದೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸಹ ಸರ್ಕಾರಕ್ಕೆ ಹೆದರುವಂಥ ಪರಿಸ್ಥಿತಿ ಇದೆ. ಇಂಥ ಪರಿಸ್ಥಿತಿ ಪಾಕಿಸ್ಥಾನದಂತ ಸರ್ವಾಧಿಕಾರಿ ದೇಶಗಳಲ್ಲಿ ಮಾತ್ರ ಇರುತ್ತಿತ್ತು” ಎಂದು ಅವರು ಹೇಳಿಕೆ ನೀಡಿದ್ದರು.

ಹರ್ಯಾಣದಲ್ಲಿ ಇಂದು ನಡೆದ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಅವರು ಕರ್ನಾಟಕದ ರಾಜಕೀಯದ ಕುರಿತು ಬೇಸರ ವ್ಯಕ್ತಪಡಿಸಿದರು. ಬಹುಮತವಿಲ್ಲದಿದ್ದರೂ ಸರ್ಕಾರ ರಚಿಸಿದ, ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ ನಡೆಯನ್ನು ರಾಹುಲ್ ಗಾಂಧಿ ವಿರೋಧಿಸಿದರು.

ಮೇ 15 ರಂದು ಹೊರಬಿದ್ದ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ 104 ಸ್ಥಾನ ಗೆದ್ದು ಸಿಂಗಲ್ ಲಾರ್ಜೆಸ್ಟ್ ಪಾರ್ಟಿಯಾಗಿ ಹೊರಹೊಮ್ಮಿತ್ತು. ಆದರೆ ಬಹುಮತ ಪಡೆದಿರಲಿಲ್ಲ. ಇತ್ತ 78 ಸ್ಥಾನ ಗೆದ್ದ ಕಾಂಗ್ರೆಸ್, 38 ಸ್ಥಾನ ಗೆದ್ದ ಜೆಡಿಎಸ್ ಗೆ ತನ್ನ ಬೆಂಬಲ ನೀಡಿ ಸರ್ಕಾರ ರಚಿಸಲು ಮನವಿ ಮಾಡಿತ್ತು. ಆದರೆ ರಾಜ್ಯಪಾಲರು ಬಿಜೆಪಿಯನ್ನು ಸರ್ಕಾರ ರಚನೆಗೆ ಆಹ್ವಾನಿಸಿದ್ದರಿಂದ ಇಂದು ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English