ಬೆಂಗಳೂರು: ಕಾಂಗ್ರೆಸ್ ಮುಕ್ತ ಭಾರತ ಮಾಡುವ ಗುರಿ ನಮ್ಮದು. ಹೀಗಾಗಿ ನಿಮ್ಮ ಯಾವ ಮಾತಿಗೂ ಉತ್ತರಿಸಬೇಕಿಲ್ಲ. ಎಲ್ಲದಕ್ಕೂ ಮತದಾರರು ಸಮರ್ಪಕ ಉತ್ತರ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಗುರುವಾರ ಸಂಜೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅನೇಕ ಹಿರಿಯರ ಆಶೀರ್ವಾದ ನನಗೆ ಸಿಕ್ಕಿದೆ. ಸರ್ಕಾರ ನಿಮ್ಮ ಜೊತೆಗಿದೆ, ನಿಮ್ಮನ್ನು ಕಾಪಾಡುತ್ತದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯದ ಜನತೆಗೆ, ಬಿಜೆಪಿ ನಾಯಕರು, ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಬಿಜೆಪಿ ಅಧಿಕಾರಕ್ಕೆ ಬರುತ್ತಾ ಇದೆ, ಇದನ್ನು ಸಹಿಸಿಕೊಳ್ಳಲಾಗದೆ ಕೆಲವರು ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ನಮ್ಮ ಕೆಲವು ಹಿರಿಯ ಶಾಸಕರಿಗೆ ಸೋಲಾಗಿದೆ. ಮನಸ್ಸಿಗೆ ನೋವು ಮಾಡ್ಕೋಬೇಡಿ. 104 ಸ್ಥಾನ ಪಡೆದುಕೊಳ್ಳಲು ಮುರಳೀಧರ್ ರಾವ್ ಕಾರಣ. ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ ಬೆಳೆಸಾಲ, ನೇಕಾರರ ಸಾಲ ಮನ್ನಾ ಬಗ್ಗೆ ಚರ್ಚೆ ನಡೆದಿದ್ದು, ನಾಲ್ಕು ದಿನಗಳಲ್ಲಿ ನಿರ್ಧಾರ ಘೋಷಿಸುವುದಾಗಿ ತಿಳಿಸಿದರು.
Click this button or press Ctrl+G to toggle between Kannada and English