ಮಂಗಳೂರು ವಿಮಾನ ನಿಲ್ದಾಣದಲ್ಲಿ 66.67 ಲಕ್ಷ ರೂ. ಮೌಲ್ಯದ ಚಿನ್ನ ವಶ

2:36 PM, Friday, May 18th, 2018
Share
1 Star2 Stars3 Stars4 Stars5 Stars
(No Ratings Yet)
Loading...

DRI-goldಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಿಮಾನ ನಿಲ್ದಾಣದಲ್ಲಿ 2 ಕೆಜಿ 116 ಗ್ರಾಂ ತೂಕದ 66.67 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆ ಹಚ್ಚಿದ್ದಾರೆ.

ಮುಂಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವಿಮಾನದಲ್ಲಿ ಚಿನ್ನ‌ ಪತ್ತೆಯಾಗಿದೆ. ಎಸ್‌ಜಿ‌ 479 ಸ್ಪೈಸ್ ಜೆಟ್ ವಿಮಾನದ ಶೌಚಾಲಯದಲ್ಲಿ ಸಾಕ್ಸ್‌ನಲ್ಲಿ ಚಿನ್ನ ಇಡಲಾಗಿತ್ತು. ತಲಾ 1 ಕೆಜಿ ಚಿನ್ನದ ಬಿಲ್ಲೆ ಹಾಗೂ 116.640 ಗ್ರಾಂನ ಚಿನ್ನದ ಬಿಲ್ಲೆ ಪತ್ತೆಯಾಗಿದೆ. ದುಬೈನಿಂದ ಮುಂಬೈ ಮೂಲಕ ಮಂಗಳೂರಿಗೆ ಚಿನ್ನವನ್ನು ತರಲಾಗಿತ್ತು. ಚಿನ್ನವನ್ನು ವಶಪಡಿಸಿಕೊಂಡ ‌ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English