ಬೆಂಗಳೂರು: ನಾಳೆ ಹೊಸ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಲಿದ್ದು, ನಿಯಮದ ಪ್ರಕಾರ ಮೊದಲಿಗೆ ಹಂಗಾಮಿ ಸ್ಪೀಕರ್ ಆಯ್ಕೆ ನಡೆಯಬೇಕಿದೆ. ಈ ಪ್ರಕಾರ ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಬೋಪಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ.ಜಿ. ಬೋಪಯ್ಯ ಸ್ಪೀಕರ್ ಆಗಿ ಕೆಲಸ ಮಾಡಿದ್ದರು. ಇದೀಗ ರಾಜ್ಯಪಾಲರು ಬೋಪಯ್ಯ ಅವರನ್ನೇ ಹಂಗಾಮಿ ಸ್ಪೀಕರ್ ಆಗಿ ಆಯ್ಕೆಗೊಂಡಿದ್ದಾರೆ. ಇದಕ್ಕೂ ಕಾಂಗ್ರೆಸ್ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ.
ಹಂಗಾಮಿ ಸ್ಪೀಕರ್ ಆಯ್ಕೆ ಹೇಗೆ …?
1. ಸದನದ ಹಿರಿಯ ಶಾಸಕರನ್ನು ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಲಾಗುತ್ತದೆ
2. ಜೇಷ್ಠತೆಯ ಆಧಾರದ ಮೇಲೆ ಈ ಹಂಗಾಮಿ ಸ್ಪೀಕರ್ ಆಯ್ಕೆ ನಡೆಯುತ್ತದೆ
3. ವಿಧಾನಸೌಧದ ಸಚಿವಾಲಯದಿಂದ ಹಿರಿಯ ಶಾಸಕರ ಪಟ್ಟಿ ರಾಜ್ಯಪಾಲರಿಗೆ ರವಾನೆ ಆಗುತ್ತೆ
4. ಸಚಿವಾಲಯ ನೀಡಿದ ಹಿರಿಯ ಶಾಸಕರ ಪಟ್ಟಿಯನ್ನು ನೋಡಿ ರಾಜ್ಯಪಾಲರು ಹಂಗಾಮಿ ಸ್ಪೀಕರ್ ನೇಮಕ
5. ರಾಜ್ಯಪಾಲರೇ ಹಂಗಾಮಿ ಸ್ಪೀಕರ್‌ಗೆ ಪ್ರಮಾಣ ವಚನ ಬೋಧನೆ ಮಾಡ್ತಾರೆ
Click this button or press Ctrl+G to toggle between Kannada and English