ನೂತನ ಸರಕಾರದ ವಿಶ್ವಾಸ ಮತ ಯಾಚನೆ, ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

10:33 AM, Saturday, May 19th, 2018
Share
1 Star2 Stars3 Stars4 Stars5 Stars
(No Ratings Yet)
Loading...

vidhana-soudhaಮಂಗಳೂರು: ಬೆಂಗಳೂರಿನ ವಿಧಾನ ಸೌಧದಲ್ಲಿ ನಾಳೆ ನೂತನ ಸರಕಾರದ ವಿಶ್ವಾಸ ಮತ ಯಾಚನೆ ನಡೆಯಲಿದೆ . ಈ ಕುರಿತು ದೇಶಾದ್ಯಂತ ಭಾರೀ ಕುತುಹಲ ವ್ಯಕ್ತವಾಗಿದೆ. ಈ ವಿಶ್ವಾಸ ಮತ ಯಾಚನೆಯ ಬಿಸಿ ಮಂಗಳೂರಿಗೂ ತಟ್ಟಿದೆ. ರಾಜ್ಯದಲ್ಲಿ ನಾಳೆ ಹೊಸ ಸರಕಾರ ವಿಶ್ವಾಸ ಮತ ಯಾಚನೆ ಕಸರತ್ತು ನಡೆಯುವ ಸಂದರ್ಭ ಮಂಗಳೂರಿನಲ್ಲಿ ರಾಜಕೀಯ ಘರ್ಷಣೆಯಾಗುವ ಆತಂಕದ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಾಳೆ ಮುಂಜಾನೆ ಯಿಂದ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮಂಗಳೂರು ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ನಿಷೇಧಾಜ್ಞೆ ಜಾರಿಮಾಡಿ ಆದೇಶ ಹೊರಡಿಸಿದ್ದು, ನಾಳೆ ಮುಂಜಾನೆ 8 ಗಂಟೆ ಯಿಂದ ಮೇ 20 ಬೆಳಿಗ್ಗೆ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ನಾಳೆ ವಿಧಾನ ಸೌಧದಲದಲಿ ಬಿಜೆಪಿ, ಕಾಂಗ್ರೇಸ್ ಹಾಗೂ ಜೆಡಿಎಸ್ ವಿಶ್ವಾಸ ಮತ ಪರೀಕ್ಷೆಗೆ ಒಳಪಡಲಿವೆ.

ಈ ಕುರಿತು ಈಗಾಗಲೇ ರಾಜ್ಯಾದ್ಯಂತ ಪರ ವಿರೋಧ ಚರ್ಚೆ, ಅನಿಸಿಕೆಗಳು ವ್ಯಕ್ತವಾಗುತ್ತಿವೆ. ಈ ವಿರೋಧ ,ಭಿನ್ನಾಭಿಪ್ರಾಯಗಳು ಘರ್ಷಣೆಗೆ ಕಾರಣವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಈ ಕಾರಣ ಮಂಗಳೂರಿನಲ್ಲಿಯೂ ರಾಜಕೀಯ ಘರ್ಷಣೆ ನಡೆಯುವ ಆತಂಕ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಿಷೇಧಾಜ್ಞೆ ಅನ್ವಯ ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ , ಕೆರಿಗಳಲ್ಲಿ , ಸಾರ್ವಜನಿಕ ಕಟ್ಟಡ ಮತ್ತು ಸರಕಾರಿ ಕಟ್ಟಡ ಕಚೇರಿ ಸುತ್ತಮುತ್ತ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

ನಾಳೆ ಯಾವುದೇ ರೀತಿಯ ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ , ರಾಜಕೀಯ ಸಭೆ ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ. ಪಟಾಕಿ ಸಿಡಿಸುವುದು , ಅಥವಾ ಇನ್ನಿತರ ಸ್ಪೋಟಕ ವಸ್ತುಗಳನ್ನು ಸಿಡಿಸುವುದನ್ನು ಅಥವಾ ಹೊಂದಿರುವುದನ್ನು ಸೆಕ್ಷನ್ 144 ಅನ್ವಯ ನಿಷೇಧಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English